ದೇವರಹಿಪ್ಪರಗಿ: ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ಮಾಡುವುದರ ಮೂಲಕ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಿದರು.
ತಾಲ್ಲೂಕಿನ ಕೊಂಡಗೂಳಿ ಗ್ರಾಮದಲ್ಲಿ ಭಾನುವಾರ ಜರುಗಿದ ಪಂಚಾಯಿತಿ ಸಿಬ್ಬಂದಿ ಸೋಮಶೇಖರ ಆನೆಗುಂದಿ ಅವರ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಸಿಬ್ಬಂದಿ ಭಾಗವಹಿಸುವ ಮೂಲಕ ವಿಶೇಷ ಸಂದರ್ಭಕ್ಕೆ ಸಾಕ್ಷಿಯಾದರು.
ಈ ಸಮಯದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಸಂಜೀವ ಜುನ್ನೂರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪವಿತ್ರ ಕಾರ್ಯ ಹಾಗೂ ಕರ್ತವ್ಯ. ಪ್ರತಿ ಮತವೂ ಅತ್ಯಂತ ಪ್ರಮುಖ. ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸಬೇಕು. ಚುನಾವಣಾ ಆಯೋಗ ಜಿಲ್ಲಾ ಸ್ವೀಪ್ ಸಮಿತಿ ಮತದಾನ ಹೆಚ್ಚಳಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ಇದಕ್ಕೆಲ್ಲ ಸಾರ್ವಜನಿಕರು ಕೈ ಜೋಡಿಸಬೇಕು. ಮತದಾನದ ದಿನ ಯಾವುದೇ ಕೆಲಸವಿದ್ದರೂ ಮೊದಲು ಮತ ಚಲಾಯಿಸಬೇಕು. ಇದರಿಂದ ಪ್ರಜಾಪ್ರಭುತ್ವಕ್ಕೆ ಮತ್ತಷ್ಟು ಮಹತ್ವ ಮೆರಗು ಬರುತ್ತದೆ ಎಂದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ಶಿವಾನಂದ ಮೂಲಿಮನಿ, ಆನಂದ, ಗೊಲ್ಲಾಳ ಸೇರಿದಂತೆ ಸಾರ್ವಜನಿಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

