Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚುನಾವಣೆ ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಿ :ಡಾ.ರತನ್ ಕನ್ವರ್
(ರಾಜ್ಯ ) ಜಿಲ್ಲೆ

ಚುನಾವಣೆ ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಿ :ಡಾ.ರತನ್ ಕನ್ವರ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತೀಯ ಚುನಾವಣೆ ಆಯೋಗ ಸೂಚಿಸಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ನಿರ್ವಹಿಸಿ ೨೦೨೪ ರ ಲೋಕಸಭೆ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ವಿಜಯಪುರ ಮೀಸಲು ಮತಕ್ಷೇತ್ರದ ಚುನಾವಣಾ ವೀಕ್ಷಕರಾದ ಡಾ.ರತನ್ ಕನ್ವರ್ ಎಚ್. ಗಂಧವಿಚರಣ ಹೇಳಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು. ಜಿಲ್ಲೆಯ ಮತದಾರ ಮುಕ್ತವಾಗಿ ಮತದಾನ ಮಾಡಲು ಶಾಂತಿಯುತವಾದ, ಸುವ್ಯವಸ್ಥಿತವಾದ ವಾತಾವರಣ ರೂಪಿಸಬೇಕು. ಮತಗಟ್ಟೆಗಳಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮಸ್ಯೆಗಳು ಕಂಡು ಬಂದರೆ ಮೊದಲ ಆದ್ಯತೆಯ ಮೇರೆಗೆ ನಿವಾರಿಸಬೇಕು. ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಪೊಲೀಸ್ ವಿಕ್ಷಣಾಧಿಕಾರಿ ಎಂ. ಅರ್ಶಿ ಅವರು ಮಾತನಾಡಿ, ಚುನಾವಣೆಗೆ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ಕಾರ್ಯಕ್ಷಮತೆಯಿಂದ ಕರ್ತವ್ಯ ನಿರ್ವಹಿಸಬೇಕು. ಮತದಾನಕ್ಕೆ ಪ್ರಜೆಗಳ ಸಹಕಾರ ಅತಿ ಅವಶ್ಯಕವಿದ್ದು, ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಕ್ರಮವಹಿಸಬೇಕು ಎಂದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ೨೦೮೫ ಮತಗಟ್ಟೆಗಳಿದ್ದು, ೯,೮೭,೯೭೪ ಪುರುಷ, ೯,೫೭,೯೦೬ ಮಹಿಳಾ, ೨೧೦ ಇತರೆ ಮತದಾರರು ಸೇರಿದಂತೆ ಒಟ್ಟು ೧೯,೪೬,೦೯೦ ಮತದಾರರು ಇದ್ದಾರೆ. ಇದರಲ್ಲಿ ೨೧,೮೦೩ ವಿಶೇಷ ಚೇತನ ಮತದಾರರು, ೪೪,೧೬೯ ಯುವ ಮತದಾರರು, ೧೭,೧೫೭ ಹಿರಿಯ(೮೫ ವರ್ಷ ಮೇಲ್ಪಟ್ಟ) ಮತದಾರರು, ೧,೮೮೨ ಸೇವಾ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.
ಇಲ್ಲಿಯವರೆಗೆ ವಶಪಡಿಸಿಕೊಂಡ ಅಕ್ರಮ ಹಣ, ಮದ್ಯ , ಗಾಂಜಾ ಮಾದಕ ವಸ್ತುಗಳ ಒಟ್ಟು ಮೌಲ್ಯ ೩.೪೫ ಕೋಟಿ ರೂಪಾಯಿ ಆಗುತ್ತದೆ. ೧೧೮ ಪ್ರಕರಣ ಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಒಟ್ಟು ೨೯ ಚೆಕ್ ಪೋಸ್ಟ್ ಗಳನ್ನೂ ಸ್ಥಾಪಿಸಲಾಗಿದೆ. ಅದರಲ್ಲಿ ೧೧ ಅಂತರ್ ರಾಜ್ಯ , ೧೩ ಅಂತರ್ ಜಿಲ್ಲಾ ಹಾಗೂ ೫ ಸ್ಥಳೀಯ ನಾಕ ಗಳ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು ೨೩೬೩ ಪರವಾನಿಗೆ ಪಡೆದ ಶಸ್ತ್ರಾಸ್ತ್ರಗಳ ಪೈಕಿ ೨೨೭೪ ಶಸ್ತ್ರಾಸ್ತ್ರ ಗಳ ಠೇವಣಿ ಪಡೆಯಲಾಗಿದೆ. ಬ್ಯಾಂಕ್ ಹಾಗೂ ಜೀವ ಬೆದರಿಕೆ ಪ್ರಕರಣ ಸೇರಿದಂತೆ ಒಟ್ಟು ೫೪ ಶಸ್ತ್ರಾಸ್ತ್ರ ಗಳಿಗೆ ವಿನಾಯತಿ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅದ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಲವು ರಚನಾತ್ಮಕ ಚಟುವಟಿಕೆ ಗಳನ್ನ ಹಮ್ಮಿಕೊಂಡಿದ್ದು, ಇಲ್ಲಿಯವರೆಗೆ ೩೭೨ ವಿಭಿನ್ನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ೪೦ ಮಹಿಳಾ ಮತಗಟ್ಟೆ ಸ್ಥಾಪಿಸಲಾಗುವುದು, ೮ ಮತಗಟ್ಟೆಗಳನ್ನು ವಿಶೇಷ ಮಾದರಿ ರೀತಿಯಲ್ಲಿ ಸ್ಥಾಪಿಸಲಾಗುವುದು. ಸೇವಾ ಮತದಾರರಿಗೆ ೮ ಮತಗಟ್ಟೆಗಳನ್ನು, ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂದ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.