Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ :ಡಾ.ವೃಷಭಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ :ಡಾ.ವೃಷಭಲಿಂಗ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಇತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಚಾಣ ಪೀಠದ ಡಾ. ವೃಷಭಲಿಂಗ ಮಹಾಶಿವಯೋಗಿಗಳು ಹೇಳಿದರು.
ಸೋಮವಾರ ತಾಲೂಕಿನ ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ಹಾಗೂ ಹನುಮ ಜಯಂತಿ ಮತ್ತು ಗೈಬೂಸಾಬ್ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಧರ್ಮಸಭೆಯ ಪಾವನ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಧರ್ಮದಲ್ಲಿ ರಾಜಕೀಯವಿರಬಾರದು ಆದರೆ ರಾಜಕಾರಣದಲ್ಲಿ ಧರ್ಮವಿರಬೇಕು. ಅದನ್ನು ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.
ಇಂಗಳಗಿ ಗ್ರಾಮಸ್ಥರು ಸೇರಿಕೊಂಡು ಸಾಮೂಹಿಕ ವಿವಾಹದ ಜೊತೆಗೆ ಜಾತಿ, ಮತ, ಪಂಥ ಎನ್ನದೆ ಹಿಂದೂ ಮುಸ್ಲಿಂ ಎರಡು ದೇವತೆಗಳ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಎಲ್ಲರೂ ಸೇರಿ ಆಚರಿಸುತ್ತಿರುವುದು ಸಂತಸ ತಂದಿದೆ. ಇಂಡಿ ತಾಲೂಕಿನಲ್ಲಿ ಇಂಗಳಗಿ ಗ್ರಾಮ ಆದರ್ಶ ಗ್ರಾಮವಾಗಿದೆ ಎಂದರು.
ನೂತನವಾಗಿ ನವದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು. ಉತ್ತಮವಾಗಿ ಧರ್ಮದ ಹಾದಿಯಲ್ಲಿ ಸಂಸಾರ ನಡೆಸಿಕೊಂಡು ಹೋಗಬೇಕು. ಸಂಸಾರದಲ್ಲಿ ಬಿರುಕು ಮೂಡದಂತೆ ಜೀವನ ನಡೆಸಬೇಕೆಂದು ಸಲಹೆ ನೀಡಿದರು.
ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗುವವರು ನಿಜಕ್ಕೂ ಭಾಗ್ಯಶಾಲಿಗಳು. ಅವರು ಒಂದೊಂದೇ ವಿವಾಹಗಳನ್ನು ಮಾಡಿಕೊಂಡರೆ ಇಷ್ಟು ಜನಸಂಖ್ಯೆ ಸೇರಲು ಸಾಧ್ಯವಾಗಲ್ಲ, ಅಲ್ಲದೆ ಹತ್ತಾರು ಸ್ವಾಮೀಜಿಗಳ ಸಮ್ಮುಖದಲ್ಲಿ ಆಶೀರ್ವಾದ ಪಡೆದು ವಿವಾಹವಾದರೆ ಆ ವಿವಾಹ ಜೀವನ ಅತ್ಯುತ್ತಮವಾಗಿರುತ್ತದೆ ಎಂದ ಅವರು, ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಆರತಿಗೊಬ್ಬ, ಕೀರ್ತಿಗೊಬ್ಬಳು ಎಂದು ಎರಡೇ ಮಕ್ಕಳನ್ನು ಹೆರಬಾರದು. ಬದಲಾಗಿ ಧರ್ಮಕ್ಕೊಬ್ಬ, ದೇಶಕೊಬ್ಬ ನಮ್ಮನ್ನು ನೋಡಿಕೊಳ್ಳಲು ಒಬ್ಬ, ಸಾರ್ವಜನಿಕರ ಸೇವೆ ಮಾಡಲು ಒಬ್ಬ ಹೀಗೆ ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಎಂದರು.
ಬಹುತೇಕರು ಸಾಮೂಹಿಕ ವಿವಾಹಗಳನ್ನು ಬಡವರ ಮದುವೆ ಎನ್ನುತ್ತಾರೆ ಆದರೆ, ಸರಳ ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವವರು ನಿಜಕ್ಕೂ ಪುಣ್ಯವಂತರು ಎಂದರು.
ಆಳೂರ ಸಿದ್ದಾರೂಢ ಮಠದ ಶಂಕರಾನಂದ ಶ್ರೀಗಳು ಮಾತನಾಡಿ, ಇಂಗಳಗಿ ಗ್ರಾಮದಲ್ಲಿ ಭಾವೈಕ್ಯತೆಯಿಂದ ಜಾತ್ರೆಯನ್ನು ಆಚರಿಸುತ್ತಿರುವುದು ಸಂತಸ ತಂದಿದೆ. ಈ ನಾಡಿನಾದ್ಯಂತ ಇದೇ ಗ್ರಾಮದಂತೆ ಭಾವೈಕ್ಯತೆಯಿಂದ ಜಾತ್ರೆ ಹಬ್ಬ ಹರಿದಿನಗಳನ್ನು ಆಚರಿಸುತ್ತಾ ಸಾಗಿದರೆ ಇಡೀ ದೇಶ ಸಮೃದ್ಧವಾಗಿರುತ್ತದೆ ಎಂದರು.
ಪಿಕೆಪಿಎಸ್ ಅಧ್ಯಕ್ಷ ಪ್ರಭು ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗೋಳಸಾರದ ಅಭಿನವ ಪುಂಡಲಿಂಗ ಮಾಹಾರಾಜರು, ಇಂಡಿ ಓಂಕಾರಶ್ರಮದ ಡಾ. ಸ್ವೂರುಪಾನಂದ ಶ್ರೀಗಳು, ಖೇಡಗಿ ವಿರಕ್ತ ಮಠದ ಡಾ. ಶಿವ ಬಸವರಾಜೇಂದ್ರ ಶಿವಾಚಾರ್ಯರು ವೇದಿಕೆಯ ಸಾನಿಧ್ಯ ವಹಿಸಿದ್ದರು.
ವೇದಿಕೆಯಲ್ಲಿ ನಿವೃತ್ತ ಪ್ರಾಚಾರ್ಯೆ ಶೈಲಜಾ ಬಿರಾದಾರ, ಅಶೋಕ ಕುಲಕರ್ಣಿ, ದೇವೇಂದ್ರ ಕುಂಬಾರ, ಹಸನ್ ಮಣ್ಣೂರ, ಬಸವರಾಜ ಕಿತ್ತಲಿ, ಉಮೇಶ ಕುಲಕರ್ಣಿ, ಉಮೇಶ ಬಳಬಟ್ಟಿ, ಅರ್ಜುನ ಪೂಜಾರಿ, ನರಸಿವಂರಾವ ಕುಲಕರ್ಣಿ, ಅಶೋಕ ಬಳಬಟ್ಟಿ, ಯಲ್ಲಪ್ಪ ಸಾತಲಗಾಂವ, ಅರ್ಜುನ ಜಾಧವ, ಅಣ್ಣರಾಯ ಅಹಿರಸಂಗ, ಬಸವರಾಜ ಜಾಧವ, ಸುಭಾಷ ಥೋರಾತ, ಜಕ್ಕಪ್ಪ ಪೂಜಾರಿ, ಸಿದ್ದು ಹಂದ್ರಾಳ, ಮಾಹಾವಿರ ಪಾಟೀಲ, ಶಿವಾನಂದ ತಾವರಖೇಡ, ವಿಷ್ಣು ವಾಘಮೋರೆ, ಭೀಮರಾಯ ವಾಲೀಕಾರ ಸೇರಿದಂತೆ ಮತ್ತಿತರರು ಇದ್ದರು.
ರಾಜಕುಮಾರ್ ಚಾಬುಕಸವಾರ ನಿರೂಪಿಸಿದರು. ಅಶೋಕ ಬಳಬಟ್ಟಿ ಸ್ವಾಗತಿಸಿ ವಂದಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.