ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಗೇಟ್ ಬಳಿ ಮೊಮ್ಮಗನನ್ನು ಸ್ಕೂಟರಿನಲ್ಲಿ ಕೂರಿಸಿಕೊಂಡು ಜಾತ್ರೆಗೆ ಹೊರಟಿದ್ದ ವ್ಯಕ್ತಿಯೊಬ್ಬನಿಗೆ, ಯಮನ ರೂಪದಲ್ಲಿ ಬಂದ ಸಾರಿಗೆ ಸಂಸ್ಥೆಯ ಬಸ್ಸು ಹಿಂದಿನಿAದ ಹಾಯ್ದ ಪರಿಣಾಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಗುರುವಾರ ಸಂಭವಿಸಿದೆ.
ದುರ್ಘಟನೆಯಲ್ಲಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಂಜೆ ಸಾವನ್ನಪ್ಪಿದ್ದಾರೆ.
ಅದೃಷ್ಟವಶಾತ್ ಅಜ್ಜನ ಮುಂದೆ ಕುಳಿತಿದ್ದ ಮೊಮ್ಮಗ ಹೆಚ್ಚಿನ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಿಎಸ್ಸೈ ಆಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ನೆಲೆಸಿದ್ದ ಮಹಾದೇವಪ್ಪ ಬಸಪ್ಪ ಶಿವಪೂಜಿ ಅವರೇ ಅಪಘಾತದಲ್ಲಿ ಸಾವನ್ನಪ್ಪಿದ ನತದೃಷ್ಟ. ಅಪಘಾತವಾಗುತ್ತಿದ್ದಂತೆಯೇ ತೀವ್ರ ಗಾಯಗೊಂಡು ಪ್ರಜ್ಞಾಹೀನರಾದ ಮಹಾದೇವಪ್ಪ ಅವರನ್ನು ಕೂಡಲೇ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಸೂಚಿಸಿದ್ದರಿಂದ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮೊಮ್ಮಗ ಗೌರವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಹಲವು ದಿನಗಳಿಂದ ಘಟನಾ ಸ್ಥಳದಲ್ಲಿ ರೋಡ್ ಬ್ರೇಕರ್ ಗಳನ್ನು ಅಳವಡಿಸುವಂತೆ ಸಾಕಷ್ಟು ಸಲ ಸಾರ್ವಜನಿಕರು ದುಂಬಾಲು ಬಿದ್ದಿದ್ದರೂ ಪುರಸಭೆ ಸೇರಿದಂತೆ ಕೆಆರ್‌ಡಿಸಿಎಲ್ ಅಧಿಕಾರಿಗಳು ಕ್ಯಾರೇ ಅಂದಿರಲಿಲ್ಲ. ರೋಡ ಬ್ರೇಕರ್ ಅಳವಡಿಸಿದ್ದರೆ ಇಂಥಹದ್ದೊAದು ದುರ್ಘಟನೆ ನಡೆಯುತ್ತಿರಲಿಲ್ಲ ಎಂದು ಘಟನಾ ಸ್ಥಳದ ಸಮೀಪದ ವ್ಯಾಪಾರಸ್ಥರು ಮಾತನಾಡಿಕೊಳ್ಳುತ್ತಿದ್ದರು.