ವಿಜಯಪುರ: ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹನುಮಾನ ಜಯಂತಿ ನಿಮಿತ್ತ ಭಕ್ತರು ಮಂಗಳವಾರದಂದು ಗ್ರಾಮದ ಹನುಮಾನ ಗುಡಿಗೆ ಆಗಮಿಸಿ, ಶ್ರದ್ಧಾ, ಭಕ್ತಿಯಿಂದ ಪೂಜೆ ಸಲ್ಲಿಸಿದರು.
ಹನುಮಂತನು ಮಹಾದೇವನ ಅವತಾರವಾಗಿದ್ದು, ಅಷ್ಟ ಸಿದ್ಧಿ, ನವ ನಿಧಿ, ಶಾಶ್ವತವಾದ ಶಕ್ತಿ, ನಿಷ್ಠೆ ಮತ್ತು ಭಕ್ತಿಯ ಪ್ರತೀಕವಾಗಿದ್ದು, ಹನುಮಂತನಿಗೆ ಸಲ್ಲಿಸಿದ ಪ್ರಾರ್ಥನೆಯಿಂದ ಎಲ್ಲರ ಜೀವನದಲ್ಲಿ ಸಾಮರಸ್ಯ, ಶಕ್ತಿ ಮತ್ತು ಯಶಸ್ಸನ್ನು ತರುತ್ತಾನೆ ಎಂಬ ನಂಬಿಕೆ ಭಕ್ತರಲ್ಲಿ ಈಗಲೂ ಜನಜನಿತವಾಗಿದೆ.
ಹನುಮಂತನ ವಿಗ್ರಹಕ್ಕೆ ತುಪ್ಪದಿಂದ ಮತ್ತು ಸಾಸಿವೆ ಎಣ್ಣೆಯಿಂದ ದೀಪ ಹಚ್ಚಿ ಹನುಮನನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಲ್ಲು ಹೂಗಾರ, ನವೀನ ಗುಣಕಿ, ಪ್ರಶಾಂತ ತಳವಾರ, ಸಿದ್ದು ಕನ್ನೋಳ್ಳಿ, ರಾಜು ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

