Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚುನಾವಣಾ ಆಯೋಗದ ನಿರ್ದೇಶನಗಳ ಪಾಲನೆ ಕಡ್ಡಾಯ
(ರಾಜ್ಯ ) ಜಿಲ್ಲೆ

ಚುನಾವಣಾ ಆಯೋಗದ ನಿರ್ದೇಶನಗಳ ಪಾಲನೆ ಕಡ್ಡಾಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರಿಗೆ ಮತ್ತು ಪೊಲಿಂಗ್ ಏಜೆಂಟರಿಗೆ ಗಂಬೀರವಾಗಿ ತಿಳುವಳಿಕೆ ನೀಡುವ ಕಾರ್ಯವಾಗಬೇಕು ಎಂದು ವಿಜಯಪುರ ಮೀಸಲು ಲೋಕಸಭಾ ಚುನಾವಣೆಯ ಸಾಮಾನ್ಯ ವೀಕ್ಷಕರಾದ ಡಾ. ರತನಕನ್ವರ ಹೆಚ್. ಗಡವಿಚರಣ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಮತ್ತು ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದ ಫಲಿತಾಂಶ ಪ್ರಕಟವಾಗುವರೆಗೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಪಾರದರ್ಶಕವಾಗಿರಬೇಕಾಗಿದ್ದು, ನೀವು ನೇಮಕ ಮಾಡಿಕೊಳ್ಳುವ ಏಜೇಂಟರು ಚುನಾವಣಾ ಆಯೋಗದ ಮಾರ್ಗಸೂಚಿಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೂಪದ ನಿರ್ದಿಷ್ಟವಾದ ದೂರು ಅಥವಾ ಸಮಸ್ಯೆ ಇದ್ದಲ್ಲಿ ಅದನ್ನು ಚುನಾವಣಾ ವೀಕ್ಷಕರ ಗಮನಕ್ಕೆ ತರಬೇಕು ಎಂದರು.
ವೆಚ್ಚ ವೀಕ್ಷಕ ಅನುಪ್ ಕುಮಾರ್ ಮಾತನಾಡಿ ಚುನಾವಣಾ ಆಯೋಗದ ನಿರ್ದೆಶನದಂತೆ ಪ್ರತಿಯೊಒಬ್ಬ ಅಭ್ಯರ್ಥಿಯು ಈ ಚುನಾವಣೆಗಾಗಿಯೇ ಅಭ್ಯರ್ಥಿ ಹೆಸರಿನಲ್ಲಿ ಪ್ರತ್ಯೆಕವಾದ ಬ್ಯಾಂಕ್ ಖಾತೆಯನ್ನು ತೆರೆಯಬೇಕಾಗುತ್ತದೆ. ಚುನಾವಣಾ ಆಯೋಗವು ಅಭ್ಯರ್ಥಿಗಳು ನಡೆಸುವ ಸಾರ್ವಜನಿಕಮ ಸಭೆಗಳು, ರ‍್ಯಾಲಿ, ಬ್ಯಾನರ್ ಸೇರಿದಂತೆ ಚುನಾವಣಾ ಪ್ರಚಾರಕ್ಕೆ ಕಾನೂನುಬದ್ದವಾಗಿ ಮಾತ್ರ ಖರ್ಚು ಮಾಡಲು ಈ ಬಾರಿ ೯೫ ಲಕ್ಷದವರೆಗೂ ಅನುಮೋದಿಸುತ್ತಿರುತ್ತದೆ. ಇದನ್ನು ಹೊರತುಪಡಿಸಿದ ಸಂಶಯಾಸ್ಪದ ವಹಿವಾಟುಗಳು ಕಂಡು ಬಂದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. .
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಟಿ. ಭೂಬಾಲನ್ ಮಾತನಾಡಿ ಮತಯಾಚನೆಯ ಜಾಹಿರಾತುಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಬೇಕಾದಲ್ಲಿ ಮತ್ತು ಕರಪತ್ರಗಳನ್ನು ಮುದ್ರಿಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಪಕ್ಷದ ಬಾವುಟಗಳನ್ನು ರಾಜಕಿಯ ಪಕ್ಷಗಳ ಕಾರ್ಯಲಯದ ಕಚೇರಿ ಹೊರತುಪಡಿಸಿ ಯಾರ ಮನೆಯ ಮೇಲು ಪ್ರದರ್ಶಿಸಲು ಅವಕಾಶವಿರುವುದಿಲ್ಲಾ. ಈ ಎಲ್ಲಾ ಮಾರ್ಗಸುಚಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾಗಿರುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಾಣೆ ಮಾತನಾಡಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌದ ಸೋಮನಾಳ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳಿಗೆ ಮಾದರಿ ನಡತೆ ಸಂಹಿತೆ ಕುರಿತು ತಿಳುವಳಿಕೆ ನೀಡಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.