Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಆಲಗೂರ ಗೆಲ್ಲಿಸಿ :ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಆಲಗೂರ ಗೆಲ್ಲಿಸಿ :ಎಂ.ಬಿ.ಪಾಟೀಲ

By Updated:No Comments4 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್ ಅಭ್ಯರ್ಥಿ ಆಲಗೂರ ಪರ ಸಚಿವರು-ಶಾಸಕರಿಂದ ಸಾಮೂಹಿಕ ಪ್ರಚಾರ

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಪರ ಸಾಮೂಹಿಕ ಪ್ರಚಾರ ಮಾಡುತ್ತಿರುವ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರು ಇಂದು ಮಂಗಳವಾರ ದ್ರಾಕ್ಷಿನಾಡು ತಿಕೋಟಾದಲ್ಲಿ ಭರ್ಜರಿ ಪ್ರಚಾರ ನಡೆಸಿದರು.
ಜತ್ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ, ಜವಳಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮತ್ತು ಶಾಸಕರು ಸಾಮೂಹಿಕವಾಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜನ ಎಸ್. ಲೋಣಿ, ಜಿಲ್ಲೆಯಲ್ಲಿ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟಾಗಿ ಸಾಮೂಹಿಕವಾಗಿ ಪ್ರಚಾರ ಕೈಗೊಂಡಿದ್ದೇವೆ. ದಿನೇ ದಿನೇ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರ ಪರ ಅಲೆ ಹೆಚ್ಚುತ್ತಿದ್ದು, ಮತದಾರರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಮತದಾರರಿಗೆ ಈಗ ಕೇಂದ್ರ ಸರಕಾರದ ಸುಳ್ಳು ಭರವಸೆಗಳ ಅರಿವಾಗಿದ್ದು, ಅವರೆಲ್ಲರೂ ಈಗ ಜಾಗೃತರಾಗಿದ್ದಾರೆ. ಅಷ್ಟೇ ಅಲ್ಲ, ಪ್ರೊ. ರಾಜು ಆಲಗೂರ ಅವರಿಗೆ ಮತ ಹಾಕುವ ಮೂಲಕ ಭರ್ಜರಿ ಗೆಲುವಿಗೆ ಕೈಜೊಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಮಾತನಾಡಿ, ಪ್ರೊ. ರಾಜು ಆಲಗೂರ ತಿಕೋಟಾ ತಾಲೂಕಿನವರಾಗಿದ್ದು, ಅವರು ಸಂಸದರಾಗಿ ಆಯ್ಕೆಯಾಗುವ ಅವಕಾಶವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು. ವಿಜಯಪುರ ಮತ್ತು ಬಾಗಲಕೋಟೆಯ ಹಾಲಿ ಸಂಸದರು ಏನೂ ಅಭಿವೃದ್ಧಿ ಮಾಡಿಲ್ಲ. ಇದನ್ನು ಪ್ರಶ್ನಿಸಲು ಸಂಬಂಧಿಸಿದ ಸಂಸದರೂ ಕೈಗೆ ಸಿಗುವುದಿಲ್ಲ. ರಾಜ್ಯ ಕೃಷಿ ಸಚಿವರು, ಸಿಎಂ ದೆಹಲಿಗೆ ಹೋಗಿ ಕೈಮುಗಿದು ಬರ ಪರಿಹಾರ ಕೇಳಿದರೂ ಪ್ರಧಾನಿ ಹಣ ಬಿಡುಗಡೆ ಮಾಡಿಲ್ಲ. ಅವರು ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದ್ದು, ಮುಂದೆ ನಮ್ಮನ್ನು, ನಿಮ್ಮನ್ನು ಮಾರಾಟ ಮಾಡಬಹುದು. ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ 18 ರಿಂದ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ತಾವೂ ಕೂಡ ಪ್ರೊ. ರಾಜು ಆಲಗೂರ ಅವರಿಗೆ ಹೆಚ್ಚಿನ ಮತ ಹಾಕಿ ಕ್ಷೇತ್ರದ ಮಗನನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ನೀರಾವರಿಯಿಂದಾಗಿ ಬರದ ನಾಡಿನಲ್ಲಿ ಈಗ ದೊಡ್ಡ ಬದಲಾವಣೆಯಾಗಿದ್ದು, ಬರದ ಈ ಸಂದರ್ಭದಲ್ಲಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಟ್ಯಾಂಕರ್ ಮುಂದೆ ಹೋಗಿ ನಿಲ್ಲುವುದು ತಪ್ಪಿದೆ. ಮುಂಬರುವ ದಿನಗಳಲ್ಲಿ ತುಬಚಿ- ಬಬಲೇಶ್ವರ ಏತ ನೀರಾವರಿ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಹಳ್ಳಗಳಿಗೆ ನೀರು ಬಿಡುವ ಮೂಲಕ ಪ್ರತಿಯೊಬ್ಬ ಬಾಕಿ ಉಳಿದಿರುವ ರೈತರ ಜಮೀನಿಗೆ ನೀರು ಒದಗಿಸಲಾಗುವುದು. ಅಚ್ಛೆ ದಿನ್ ಎಂಬ ಮೋದಿ ಘೋಷಣೆ ವಿಫಲವಾಗಿದ್ದು, ರೂಪಾಯಿ ಮೌಲ್ಯ ಕುಸಿದಿದೆ. ತೈಲ ಬೆಲೆ, ಅಡುಗೆ ಅನಿಲ ದರ ಹೆಚ್ಚಾಗಿದೆ. ಉದ್ಯೋಗ ನಷ್ಟ, ನೊಟ್ ಬ್ಯಾನ್ ನಿಂದ ಜನಸಾಮಾನ್ಯರು ಸಂತ್ರಸ್ತರಾಗಿದ್ದಾರೆ. ಹೀಗಾಗಿ ಬಿಜೆಪಿ ಈಗ ಮತ್ತೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದೆ. ಐಟಿ, ಇಡಿ, ಸಿಬಿಐ ದಾಳಿ ನಡೆಸಿ ದಾಳಿಗೆ ಒಳಗಾದವರಿಂದ ಎಕೆಕ್ಟ್ರಾಲ್ ಬಾಂಡ್ ಹೆಸರಿನಲ್ಲಿ ಖರೀದಿಸಲು ಒತ್ತಡ ಹಾಕಿದ್ದಾರೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಬಹಿರಂಗವಾದರೆ ಸಂಬಂಧಿಸಿದ ಎಲ್ಲರೂ ಎಲ್ಲರೂ ಜೈಲಿನಲ್ಲಿರಬೇಕಾಗುತ್ತದೆ ಎಂದು ಹೇಳಿದರು.
ವಿಜಯಪುರ ಜಿಲ್ಲೆ ಮತ್ತು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಎಲ್ಲರೂ ಭಾರಿ ಮತಗಳ ಅಂತರದಿಂದ ಗೆಲ್ಲಿಸಬೇಕು. ನಮ್ಮ ಅಭ್ಯರ್ಥಿ ಜಿಲ್ಲೆಯ ಅಭಿವೃದ್ಧಿ ಕುರಿತು 10 ಅಂಶಗಳ ಪ್ರಣಾಳಿಕೆ ಈಡೇರಿಸುವ ಗುರಿ ಹೊಂದಿದ್ದು, ಇದರಿಂದ ಜಿಲ್ಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ ಎಂದರು.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ ಗಾಂಧಿ ಅವರು ಏ. 26ರಂದು ವಿಜಯಪುರ ನಗರಕ್ಕೆ ಆಗಮಿಸುತ್ತಿದ್ದು, ತಾವೆಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಸಚಿವ ಎಂ. ಬಿ. ಪಾಟೀಲ ಮನವಿ ಮಾಡಿದರು.
ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ದೇಶಾದ್ಯಂತ ಮೋದಿ ವಿರೋಧಿ ಅಲೆಯಿದೆ. ಸಚಿವ ಎಂ. ಬಿ. ಪಾಟೀಲರು ಈ ಭಾಗದಲ್ಲಿ ನೀರು ಬಾರದ ಭಾಗಕ್ಕೆ ನೀರಾವರಿ ಮಾಡುವ ಮೂಲಕ ಜನರಿಗೆ ಸಂತೃಪ್ತಿ ತಂದಿದ್ದಾರೆ. ಹೀಗಾಗಿ ದ್ರಾಕ್ಷಿ ನಾಡಿನ ಪ್ರಜ್ಞಾವಂತ ಮತದಾರರು ನಿಮ್ಮ ಸ್ವಾಭಿಮಾನದ ಪ್ರತೀಕವಾಗಿರುವ ಮತ್ತು ಪ್ರಬುದ್ಧ ಅಭ್ಯರ್ಥಿಯಾಗಿರುವ ಪ್ರೊ. ರಾಜು ಆಲಗೂರ ಅವರಿಗೆ ಮತ ಹಾಕಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಬನಿ ನಿಯಮಿತ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ ಮಾತನಾಡಿ, ರಾಜಕೀಯ ವ್ಯವಸ್ಥೆಯಲ್ಲಿ ನಿಮ್ಮ ಹಿತ ಬಯಸುವ ಸರಕಾರವನ್ನು ಆಯ್ಕೆ ಮಾಡಿದರೆ ನಿಮ್ಮ ಪರವಾಗಿ ಕೆಲಸ ಮಾಡುತ್ತಾರೆ. ಪ್ರೊ. ರಾಜು ಆಲಗೂರ ಪ್ರಾಧ್ಯಾಪಕರಾಗಿ, ಶಾಸಕರಾಗಿ ಸೇವೆ ಮಾಡಿದ್ದು, ನಿಮ್ಮ ಪರವಾಗಿ ದುಡಿಯಲು ಚುನಾವಣೆಯಲ್ಲಿ ಗೆದ್ದು ನಿಮ್ಮ ಪರವಾಗಿ ಕೆಲಸ ಮಾಡಲಿದ್ದಾರೆ. ಎಲ್ಲರೂ ಸರಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಶೇ. 80 ರಷ್ಟು ಮತದಾನ ದಾಖಲಾಗುವಂತೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, ಕಳೆದ 10 ವರ್ಷಗಳಿಂದ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸಮರ್ಪಕವಾದ ಅನುದಾನ ನೀಡಿಲ್ಲ. ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಡಿ ನಂತರ ದೇಶದ ಅಮೂಲಾಗ್ರ ಬದಲಾವಣೆಗೆ ಶ್ರಮಿಸಿದೆ. ಸಂಸತ್ತಿನಲ್ಲಿ ನಿಮ್ಮೆಲ್ಲರ ಸಮಸ್ಯೆಗಳಿಗೆ ಧ್ವನಿಯಾಗಿ ಸ್ಪಂದಿಸಲು ಈ ಬಾರಿ ಅವಕಾಶ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಐಸಿಸಿ ವೀಕ್ಷಕ ಸಯ್ಯದ ಬುರಾನ, ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ ಮಾತನಾಡಿದರು.
ಇದೇ ವೇಳೆ ಜಿಲ್ಲಾ ಪಂಚಾಯಿತಿ ಬಿಜೆಪಿ ಮಾಜಿ ಸದಸ್ಯೆ ಶೋಭಾ ಹಲ್ಯಾಳ ಮತ್ತ ತಿಕೋಟಾ ತಾಲೂಕು ಬಿಜೆಪಿ ಕಾರ್ಯದರ್ಶಿ ಹಮೀದ ಬಾಗವಾನ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಧೋ. ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮಾಜಿ ಶಾಸಕ ಶರಣಪ್ಪ ಸುಣಗಾರ, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ, ಕಾಂಗ್ರೆಸ್ ಅಬ್ದುಲ ಹಮೀದ್ ಮುಶ್ರಿಫ್, ಮುಖಂಡರಾದ ಸಿದ್ದಣ್ಣ ಸಕ್ರಿ, ಅರ್ಜುನ ರಾಠೋಡ, ಜಕ್ಕಪ್ಪ ಯಡವೆ, ಮಧುಕರ ಜಾಧವ, ಭಾಗೀರಥಿ ತೇಲಿ, ಯಾಕೂಬ ಜತ್ತಿ, ಪ್ರಭಾವತಿ ನಾಟಿಕಾರ, ಆರ್. ಜಿ. ಯರನಾಳ, ವಿ. ಎಸ್. ಪಾಟೀಲ, ಬಸವರಾಜ ಪಾಟೀಲ, ಟಪಾಲ್ ಎಂಜಿನಿಯರ್, ಶಂಕರ ಚವ್ಹಾಣ, ಸುಜಾತಾ ಕಳ್ಳಿಮನಿ, ಶ್ರೀಶೈಲಗೌಡ ಪಾಟೀಲ ನಿಡೋಣಿ, ಗೀತಾಂಜಲಿ ಪಾಟೀಲ, ಡಾ. ಮೈಶಾಳ, ಕಾಂತಾ ನಾಯಕ, ಎಂ. ಎಸ್. ಲೋಣಿ, ಸೋಮನಾಥ ಕಳ್ಳಿಮನಿ, ವಿ. ಎಸ್. ಪಾಟೀಲ, ಈರಗೊಂಡ ಬಿರಾದಾರ, ಜಾಕೀರ ಬಾಗವಾನ, ಡಿ. ಎಲ್. ಚವ್ಹಾಣ, ಪ್ರಶಾಂತ ಝಂಡೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.