ಸಿಂದಗಿ: ಈ ಲೋಕಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿಯ ಮದ್ಯ ನಡೆಯುತ್ತಿರುವ ಚುನಾವಣೆಯಲ್ಲ. ಇದು ಧರ್ಮ ಮತ್ತು ಅಧರ್ಮದ ಮದ್ಯ ನಡೆಯುತ್ತಿರುವ ಚುನಾವಣೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಸಂವಿಧಾನ ವಿರೋಧಿ, ಕೋಮುವಾದಿ ಪಕ್ಷವನ್ನು ಬೆಂಬಲಿಸಿ ಜನಪರ ಚಿಂತನೆ ಹೊಂದಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂಬ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ಅಧರ್ಮವನ್ನು ಸಾರುತ್ತದೆ. ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತಿದೆ. ಸಂವಿಧಾನ ಪ್ರಜಾಪ್ರಭುತ್ವ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳ ಮೇಲೆ ಕಾಂಗ್ರೆಸ್ ಪಕ್ಷವು ನಿಂತಿದೆ. ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು, ಸಂವಿಧಾನದ ಆಶಯ ಜಾರಿ ಮಾಡಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಮ್ಮ ಪಕ್ಷದ ಅಭ್ಯರ್ಥಿ ರಾಜು ಆಲಗೂರ ಅವರಿಗೆ ತಮ್ಮ ಮತ ಚಲಾಯಿಸಿ ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ್ ಮಾತನಾಡಿ, ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸರಕಾರ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ ಹಾಗೂ ದುರ್ಬಲ ವರ್ಗಗಳ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಹಿತ ಕಾಪಾಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ ಪಕ್ಷಗಳನ್ನು ದಿಕ್ಕರಿಸಿ ಜನಪರ ಚಿಂತನೆಯ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮತ ಚಲಾವಣೆ ಮಾಡಬೇಕು ಎಂದರು.
ಈ ವೇಳೆ ದಸಂಸ ತಾಲೂಕು ಸಂಚಾಲಕ ಶರಣು ಚಲವಾದಿ, ನೀಲಕಂಠ ಹೂಸಮನಿ, ಪರಸು ಬ್ಯಾಕೋಡ, ಅಪ್ಪಾರಾಯ ಬಟವಾಲ, ಜೈಭೀಮ್ ತಳಕೇರಿ, ಶಿವುಕುಮಾರ ಗಣಿಹಾರ, ಸುನೀಲ್ ಸುಂಗಠಾಣ, ಸುದೀರ್ ಬಟವಾಲ ಸೇರಿದಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

