ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ವಿಜಯಪುರ ಮೀಸಲು ಕ್ಷೇತ್ರದ ಮತದಾರರಾಗಿದ್ದು, ಲೋಕಸಭಾ ಕ್ಷೇತ್ರದಲ್ಲಿ ಮತ್ತು ಬೇರೆ ಲೋಕಸಭಾ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತದಾರರು ಮೇ.೭ ರಂದು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಲು ಸಾಧ್ಯವಾಗದೇ ಇರುವ ಅರ್ಹ ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಮೇ. ೧ ರಿಂದ ೩ರವರೆಗೆ ಬೆಳಗ್ಗೆ ೯ ರಿಂದ ಸಂಜೆ ೫ರ ವರೆಗೆ ಪೋಸ್ಟ್ಲ್ ವೊಟಿಂಗ್ ಸೆಂಟರ್ ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಸಹಾಯಕ ನಿರ್ದೇಶಕರ ಕಚೇರಿ, ಅನೌಪಚಾರಿಕ ಪಡಿತರ ವಿಭಾಗ, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ವಿಜಯಪುರ ಇಲ್ಲಿ ಪೋಸ್ಟ್ಲ್ ವೋಟಿಂಗ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರು ಮತದಾನ ಕೇಂದ್ರದಲ್ಲಿ ಚುನಾವಣೆ ಆಯೋಗ ಸೂಚಿಸಿರುವ ದಾಖಲಾತಿಗಳನ್ನು ಅಥವಾ ಗುರುತಿನ ಚೀಟಿಯೊಂದಿಗೆ ಹಾಜರಾಗಿ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಅಗತ್ಯ ಸೇವೆಯಡಿ ಬರುವ ಮತದಾರರಿಗೆ ಮೇ.೧ರಿಂದ ೩ರವರೆಗೆ ಮತದಾನಕ್ಕೆ ಅವಕಾಶ
Related Posts
Add A Comment
