ಇಂಡಿ: ಬಿಜೆಪಿ ಕಾರ‍್ಯಗಳನ್ನು ಪ್ರಶ್ನೆ ಮಾಡಿದವರಿಗೆ ಜೈಲಿಗೆ ಅಟ್ಟುತ್ತಿದ್ದಾರೆ. ದೇಶದಲ್ಲಿ ಒಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಮಂಗಳವಾರ ಸಾಯಂಕಾಲ ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ವಿಜಯಪುರ ಜಿಲ್ಲಾ ಲೋಕಸಭೆಯ ಚುನಾವಣೆಯ ಪ್ರಚಾರ ಕಾರ‍್ಯಕ್ರಮಲ್ಲಿ ಅವರು ಮಾತನಾಡಿದರು.
ಸಂವಿಧಾನದ ಬದಲಾವಣೆಯ ಹುನ್ನಾರ ಮಾಡುತ್ತಿದ್ದಾರೆ. ದೇಶದಲ್ಲಿ ಸರ್ವಾಧಿಕಾರದ ಧೋರಣೆಯಿದೆ ಎಂದು ಆರೋಪಿಸಿದ ಅವರು, ಯಶಸ್ವಿ ಪ್ರಜಾ ಪ್ರಭುತ್ವಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ದೇಶದ ಜನತೆಯ ಗುಲಾಮಗಿರಿ ಕಿತ್ತೊಗೆಯಲು ಮತ್ತು ಸ್ವಾತಂತ್ರ‍್ಯ ತಂದು ಕೊಡಲು ಕಟ್ಟಿದ ಪಕ್ಷ ಕಾಂಗ್ರೆಸ್. ಅದಕ್ಕೆ ತನ್ನದೇಯಾದ ಇತಿಹಾಸವಿದೆ. ಅದನ್ನು ಹುಟ್ಟುಹಾಕಿದ ಅನೇಕರು ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ದೇಶದ ಪ್ರತೀ ಕುಟುಂಬದ ಮಹಿಳೆಗೆ ವರ್ಷಕ್ಕೆ ೧ ಲಕ್ಷ ಹಣ ನೀಡುವದಲ್ಲದೇ ಯುವಕರಿಗೆ ಉದ್ಯೋಗ ನೀಡಲಾಗುವದು ಎಂದು ಭರವಸೆ ನೀಡಿದರು.
ಬ.ಬಾಗೇವಾಡಿ ಶಾಸಕ, ಸಚಿವ ಶಿವಾನಂದ ಪಾಟೀಲ ಮಾತನಾಡಿ, ದೇಶದಲ್ಲಿ ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ. ಅಂತವರಿಗೆ ದೂರ ಇಡಿ. ಸರ್ವರನ್ನೂ ಗೌರವಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಆಯ್ಕೆ ಮಾಡಬೇಕೆಂದರು.
ಬಿಜೆಪಿ ಬರ ಪರಿಹಾರದ ಹಣ ನೀಡಿಲ್ಲ. ರೈತರ ಬೆಳೆಗಳಿಗೆ ಯೋಗ್ಯ ಬೆಲೆ ನೀಡಿಲ್ಲ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವದಲ್ಲದೇ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡುವದಾಗಿ ಭರವಸೆ ನೀಡಿದರು.
ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ವಿಜಯಪುರ ಲೋಕ ಸಭೆಯ ಕಾಂಗ್ರೆಸ್ ಅಭ್ಯರ್ಥಿ ಎಚ್.ಆರ್. (ರಾಜು) ಆಲಗೂರ ಮಾತನಾಡಿದರು.
ಮಾಜಿ ಶಾಸಕ ಶರಣಪ್ಪ ಸುಣಗಾರ, ಕಾಂಗ್ರೆಸ್ ಪಕ್ಷದ ಚುನಾವಣೆಯ ವೀಕ್ಷಕ ಸೈಯದ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ ಮಾತನಾಡಿ, ಕಾಂಗ್ರೆಸ ಪಕ್ಷದ ಅಭ್ಯರ್ಥಿ ರಾಜು ಆಲಗೂರ ಪರ ಮತ ಯಾಚಿಸಿದರು.
ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಶಾಸಕ ವಿಠ್ಠಲ ಕಟಕದೋಂಡ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಅಮೀದ ಮುಷರಫ್, ಮಾಜಿ ಶಾಸಕ ಮುಕುಬುಲ್ ಭಾಗವಾನ, ಅರುಣ ರಾಠೋಡ, ಕಾಂತಾ ನಾಯಕ, ಇಲಿಯಾಸ್ ಬೋರಾಮಣಿ, ಬಾಬುಸಾಹುಕಾರ ಮೇತ್ರಿ, ಜೆಟ್ಟೆಪ್ಪ ರವಳಿ, ಅರ್ಜುನ ಚವ್ಹಾಣ, ಗುರಣಗೌಡ ಪಾಟೀಲ, ಮಹಾದೇವ ಪೂಜಾರಿ, ಶೇಖರ ನಾಯಕ, ನಿರ್ಮಲಾ ತಳಕೇರಿ, ಶೈಲಜಾ ಜಾಧವ, ಎಂ.ಆರ್. ಪಾಟೀಲ, ಶ್ರೀಕಾಂತ ಕುಡಿಗನೂರ ಇದ್ದರು.
ಜಾವೀದ ಮೋಮಿನ ಸ್ವಾಗತಿಸಿದರು. ತಮ್ಮಣ್ಣ ಪೂಜಾರಿ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
ಯಶಸ್ವಿ ಪ್ರಜಾಪ್ರಭುತ್ವಕ್ಕಾಗಿ ಕಾಂಗ್ರೆಸ್ ಗೆ ಮತ ನೀಡಿ :ಯಶವಂತರಾಯಗೌಡ
Related Posts
Add A Comment

