ಸಿಂದಗಿ: ಜಿಲ್ಲೆಯಲ್ಲಿ ಮೇ.೭ರಂದು ಲೋಕಸಭಾ ಚುನಾವಣಾ ಮತದಾನ ನಡೆಯಲಿದ್ದು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮುಕ್ತ ಮತ್ತು ನ್ಯಾಯಯುತವಾಗಿ ಮತ ಚಲಾಯಿಸಿ ಎಂದು ತಾಪಂ ಇಒ ಸುಬ್ರಮಣ್ಯ ಶರ್ಮಾ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್, ಶಿಕ್ಷಣ ಇಲಾಖೆ, ಪುರಸಭೆ ಕಾರ್ಯಾಲಯ, ಸಿಡಿಪಿಒ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಮತದಾನ ಜಾಗೃತ ಅಭಿಯಾನ ಜಾಥಾ ಮತ್ತು ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೇ.೭ರಂದು ಎಲ್ಲರೂ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ. ಮತದಾನ ಪ್ರತಿಶತ ಹೆಚ್ಚಿಸಿ. ನಿಮ್ಮ ಹಕ್ಕು ಚಲಾಯಿಸಿ ಎಂದರು.
ಈ ವೇಳೆ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಜಾಥಾ ಸಂಗೋಳ್ಳಿ ರಾಯಣ್ಣ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಮಹಾತ್ಮಾ ಗಾಂಧಿ ವೃತ್ತದ ಮಾರ್ಗವಾಗಿ ತಾಲೂಕು ಪಂಚಾಯತ್ ಕಚೇರಿಗೆ ಜಾಥಾ ಕಾರ್ಯಕ್ರಮವು ತಲುಪಿ ಸಮಾಪ್ತಿಗೊಂಡಿತು.
ಇದೇ ಸಂದರ್ಭದಲ್ಲಿ ಆಲಮೇಲ ತಾಪಂ ಇಒ ಪರಿದಾ ಪಠಣ, ಕ್ಷೇತ್ರ ಶಿಕ್ಷಣಾಧಿಕರಿ ಆರಿಫ್ ಬಿರಾದಾರ್, ಸಿಡಿಪಿಒ ಶಂಭುಲಿಂಗ ಹಿರೇಮಠ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ನರೇಗಾ ನೌಕರರು, ಗ್ರಾಮಕಾಯಕ ಮಿತ್ರರು, ಮಹಿಳಾ ಒಕ್ಕೂಟದ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

