Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

2026ಕ್ಕೆ ಹಾರ್ದಿಕ ಸ್ವಾಗತ

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»’ಪ್ರಾಮಿಸ್ಡ್ ನೇಷನ್’ ಕೃತಿ ಪ್ರಧಾನಿಗೆ ಅರ್ಪಣೆ
(ರಾಜ್ಯ ) ಜಿಲ್ಲೆ

’ಪ್ರಾಮಿಸ್ಡ್ ನೇಷನ್’ ಕೃತಿ ಪ್ರಧಾನಿಗೆ ಅರ್ಪಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ

ಬೆಂಗಳೂರು: ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷವಿದ್ದವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮಿಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ – ದ ಮೇಕರ್ ಆಫ್ ನ್ಯೂ ಇಂಡಿಯಾ’ ಎಂಬ ಪುಸ್ತಕವನ್ನು ಇತ್ತೀಚೆಗೆ ಪ್ರಧಾನಿಯವರಿಗೆ ಅರ್ಪಿಸಲಾಯಿತು.
ಸೆನ್ಸ್ ಎಸೆನ್ಸ್ ಸಂಸ್ಥೆಯ ರುಷಾಲಿ ಭಂಡಾರಿ ಮತ್ತು ಯಶ್ವಿ ಭಂಡಾರಿ ಅವರು ಅತ್ಯಂತ ಕಾಳಜಿಯಿಂದ ಸಿದ್ಧಪಡಿಸಿದ ಈ ವಿಶೇಷ ಪುಸ್ತಕವನ್ನು ವಿಆರ್‌ಎಲ್ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಹೊರತರಲಾಗಿದೆ. ದೇಶದ ಎರಡೂವರೆ ಲಕ್ಷ ಅಂಧ ಮಕ್ಕಳು ಹಾಗೂ ಕಣ್ಣಿನ ಸಮಸ್ಯೆ ಎದುರಿಸುತ್ತಿರುವ 7 ಕೋಟಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಈ ಪುಸ್ತಕದಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬಹುದು.
ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ವಿಆರ್‌ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ, ವಾಣಿ ಆನಂದ ಸಂಕೇಶ್ವರ, ರುಷಾಲಿ, ಯಶ್ವಿ ಅವರು ಪುಸ್ತಕದ ಐದು ಪ್ರತಿಗಳನ್ನು ಅರ್ಪಿಸಿದರು.
ಪುಸ್ತಕದ ಮುಖಪುಟ ವೀಕ್ಷಿಸಿ, ಒಳಪುಟಗಳನ್ನು ತಿರುವಿ ಹಾಕುತ್ತ ಅತ್ಯಂತ ಆಸಕ್ತಿಯಿಂದ ವಿವರಗಳನ್ನು ಕೇಳಿ ತಿಳಿದುಕೊಂಡ ಮೋದಿಯವರು, ಇದೊಂದು ವಿಶಿಷ್ಟ ಕೃತಿಯಾಗಿದೆ. ನಿಜಕ್ಕೂ ವಿಶೇಷ ಸಾಧನೆ ಮಾಡಿದ್ದೀರಿ ಎಂದು ಪ್ರಶಂಸಿಸಿದರು.
ವಿಆರ್‌ಎಲ್ ಸಮೂಹ ಸಂಸ್ಥೆಯ ಬೆಂಬಲದಿಂದ ಪುಸ್ತಕ ಹೊರತರಲು ಸಾಧ್ಯವಾಯಿತು. ಇದನ್ನು ಅಂಧರ ಶಾಲೆಗಳಿಗೆ ತಲುಪಿಸಲಾಗಿದೆ. ಆಸಕ್ತ ಅಂಧರಿಗೆ ಲಭಿಸುವಂತೆ ಮಾಡಲಾಗಿದೆ. ನಮ್ಮ ದೇಶ ಮಾತ್ರವಲ್ಲ, ಅನ್ಯ ದೇಶಗಳ ಅಂಧರೂ ನಮ್ಮ ಪ್ರಧಾನಿಯವರ ಸಾಧನೆಗಳನ್ನು ತಿಳಿದುಕೊಳ್ಳಲು ಸಹಾಯ ಮಾಡುವ ಆಸೆಯಿದ್ದು, ವಿವಿಧ ದೇಶಗಳಿಗೆ ಪುಸ್ತಕವನ್ನು ತಲುಪಿಸುವ ಗುರಿ ಹೊಂದಿದ್ದೇವೆ ಎಂದು ರುಷಾಲಿ ಮತ್ತು ಯಶ್ವಿ ವಿವರಿಸಿದರು.
ನಿಮ್ಮ ಗುರಿ ಒಳ್ಳೆಯದು ಹಾಗೂ ವಿಶಾಲವಾಗಿದೆ. ವಿಆರ್‌ಎಲ್ ಸಮೂಹ ಸಂಸ್ಥೆ ಇಂತಹ ಒಳ್ಳೆಯ ಪ್ರಯತ್ನವನ್ನು ಬೆಂಬಲಿಸಿ ಯಶಸ್ವಿಗೊಳಿಸಿರುವುದು ಅಭಿನಂದನಾರ್ಹ ಎಂದು ಪ್ರಧಾನಿಯವರು ಹೇಳಿದರು.
ಡಾ. ಆನಂದ ಸಂಕೇಶ್ವರ ಅವರ ಕಾಳಜಿಯನ್ನು ಇದೇ ವೇಳೆ ಪ್ರಶಂಸಿಸಿದ ಮೋದಿಯವರು, ಬೇರೆ ಬೇರೆ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಲು ಪ್ರೋತ್ಸಾಹ ನೀಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಕುರಿತ ಈ ಪುಸ್ತಕವನ್ನು ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರು ಕಳೆದ ಜನವರಿಯಲ್ಲಿ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

” ವಿಆರ್‌ಎಲ್ ಲಾಜಿಸ್ಟಿಕ್ ಲಿ. ವತಿಯಿಂದ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ ನಾವು ಆರೋಗ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರಗಳಲ್ಲಿ ಹಲವು ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಗೆ ಪ್ರಯತ್ನಿಸಿದ್ದೇವೆ. ಈ ಕೆಲಸಗಳ ಸಕಾರಾತ್ಮಕ ಪರಿಣಾಮಗಳ ಬಗ್ಗೆ ನಮಗೆ ಹೆಮ್ಮೆಯಿದೆ. ಸಮಾಜದ ಎಲ್ಲರ ಏಳಿಗೆಗೆ ಪೂರಕವಾಗಿ ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತಲೇ ಇರುತ್ತೇವೆ. ಪ್ರಧಾನಿ ಅವರ ಜೀವನ ಸಾಧನೆ ಮತ್ತು ಅವರ ಕೈಂಕರ್ಯಗಳು ಅಂಧರಿಗೂ ಪ್ರೇರಣೆ ಆಗಲಿ ಎನ್ನುವ ಸದುದ್ದೇಶದಿಂದ ಈ ಪುಸ್ತಕ ಪ್ರಕಟಿಸಲು ನೆರವಾಗಿದ್ದೇವೆ.”
*– ಡಾ. ಆನಂದ ಸಂಕೇಶ್ವರ* ವ್ಯವಸ್ಥಾಪಕ ನಿರ್ದೇಶಕರು, ವಿಆರ್‌ಎಲ್ ಸಮೂಹ ಸಂಸ್ಥೆ

*ಉಷಾ ಕೃಷ್ಣಗೆ ಪುಸ್ತಕ ಕೊಡುಗೆ*

ಜೀವನದಲ್ಲಿ ಒಮ್ಮೆಯಾದರೂ ಮೋದಿ ಅವರನ್ನು ನೋಡಲೇಬೇಕೆಂದು ಹಂಬಲಿಸುತ್ತಿದ್ದ ಬೆಂಗಳೂರಿನ ಉಷಾ ಕೃಷ್ಣ ಅವರ ಕನಸು ಮೊನ್ನೆ ಈಡೇರಿತು. ಶೇ.99 ದೃಷ್ಟಿದೋಷ ಇರುವ ಉಷಾ ಅವರೊಂದಿಗೆ ಮಾತನಾಡುತ್ತಲೇ ವಿಮಾನದಿಂದ ‘ಎ ಪ್ರಾಮಿಸ್ಡ್ ನೇಷನ್’ ಬ್ರೈಲ್ ಪುಸ್ತಕವನ್ನು ತರಿಸಿ ಹಸ್ತಾಂತರಿಸಿ ವಿಆರ್‌ಎಲ್ ಸಂಸ್ಥೆಯ ಶ್ರಮ ತಮಗೆ ಸಹಾಯವಾಗಲಿ ಎಂದು ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

2026ಕ್ಕೆ ಹಾರ್ದಿಕ ಸ್ವಾಗತ

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 2026ಕ್ಕೆ ಹಾರ್ದಿಕ ಸ್ವಾಗತ
    In (ರಾಜ್ಯ ) ಜಿಲ್ಲೆ
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.