ಸಿಂದಗಿ: ಇತ್ತೀಚಿನ ದಿನಮಾನಗಳಲ್ಲಿ ನಗರ ಪ್ರದೇಶದಲ್ಲಿ ಅನೇಕ
ಕಾರಣಗಳಿಂದ ಮತದಾನದ ಪ್ರಮಾಣ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ಸಾರಂಗಮಠದ ಡಾ.ಪ್ರಭಸಾರಂಗದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದಲ್ಲಿ ೨೦೨೪ರ ಲೋಕಸಭಾ ಚುನಾವಣೆ ನಿಮಿತ್ಯ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ತಾಲೂಕ ಸ್ವೀಪ್ ಸಮಿತಿ ಹಾಗೂ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಿಂದ ಮತದಾನದ ಜಾಗೃತಿ ಮೂಡಿಸುವ ಕಾರ್ಯ ಅತ್ಯಂತ ಪ್ರಸ್ತುತವಾಗಿದೆ. ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ನಮ್ಮ ಮತ ನಮ್ಮ ಹಕ್ಕು, ಅದನ್ನು ಶ್ರದ್ಧೆಯಿಂದ ಪೂರೈಸಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಕೈಜೋಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಯಲ್ಲಿ ನಿರ್ಭಿತಿಯಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಯಾವುದೇ ದ್ರಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಪ್ರತಿಜ್ಞೆಯನ್ನು ಸ್ವೀಕರಿಸಿ ಮತ ಚಲಾಯಿಸಬೇಕು. ಮತದಾನದ ಪ್ರಮಾಣ ಪ್ರತಿಶತ ೧೦೦ಕ್ಕೆ೧೦೦ ರಷ್ಟಾಗಾಬೇಕು. ಆ ನಿಟ್ಟಿನಲ್ಲಿ ಜನಜಾಗೃತಿ ಅವಶ್ಯವಾಗಿದೆ ಎಂದರು.
ಮತದಾನ ಜಾಗೃತಿ ಅಭಿಯಾನವು ಸಾರಂಗಮಠದಿಂದ ಚಾಲನೆಗೊಂಡು ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಕೊನೆಗೊಂಡಿತು. ಮಾರ್ಗಮಧ್ಯದಲ್ಲಿ ಪ್ರಶಿಕ್ಷಣಾರ್ಥಿಗಳು ಮನೆ ಮನೆಗೆ ತೆರೆಳಿ ಕರಪತ್ರ ನೀಡಿ ಮತದಾನ ಜಾಗೃತಿ ಮೂಡಿಸಿ. ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಹೇಳುತ್ತಾ ಮತದಾನದ ಘೋಷಣೆಯನ್ನು ಕೂಗಿದರು.
ಪ್ರಾಚಾರ್ಯ ಜೆ.ಸಿ.ನಂದಿಕೋಲ, ಉಪನ್ಯಾಸಕರಾದ ಸುಧಾಕರ ಚವ್ಹಾಣ, ಪ್ರಶಾಂತ ಕುಲಕರ್ಣಿ, ಆರ್.ಎ.ಹಾಲಕೇರಿ, ಸಿ.ಜಿ.ಕತ್ತಿ, ಮಹಾದೇವಿ ಹಿರೇಮಠ, ವಿದ್ಯಾ ಮೋಗಲಿ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

