ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.೨೧ ರ ವ್ಯಾಪ್ತಿಯ ಇಬ್ರಾಹಿಂಪುರ ನಗರದಲ್ಲಿ ವಿಜಯಪುರ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿ. ನಿದೇರ್ಶಕರಾದ ರಾಮನಗೌಡ ಪಾಟೀಲ ಯತ್ನಾಳ ಅವರು ಮನೆ ಮನೆಗೆ ತೆರಳಿ ಮತಯಾಚಿಸಿದರು.
ಈ ವೇಳೆ ಮಾತನಾಡಿದ ಅವರು, ಜಗತ್ತು ಮೆಚ್ಚಿದ ನಾಯಕರಾದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ೧೦ ವರ್ಷದ ಆಡಳಿತದಲ್ಲಿ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮುಂದೆ ಕೂಡ ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಕೈಜೋಡಿಸುವ ಅಗತ್ಯವಿದೆ. ಹೀಗಾಗಿ ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಲು ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜನ ಗಡಗಿ, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶಂಕರ ಹೂಗಾರ, ಪ್ರಧಾನ ಕಾರ್ಯದರ್ಶಿ ಪಾಪುಸಿಂಗ್ ರಜಪೂತ್, ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ, ರೈತ ಮೋರ್ಚಾ ಅಧ್ಯಕ್ಷ ರಾಚು ಬಿರಾದಾರ, ಮುಖಂಡರಾದ ಮಡಿವಾಳ ಯಾಳವಾರ, ಶರಣು ಕಾಖಂಡಕಿ, ವಿರೇಂದ್ರ ಚೌಕಿಮಠ, ಬಾಳುಗೌಡ ಕಲಾದಗಿ, ನಂದಕುಮಾರ್ ಗಡಗಿ, ಪ್ರಕಾಶ ಗಡಗಿ, ಆನಂದ ಪಡಗಾನೂರ, ವಿಜಯಕುಮಾರ ಗಚ್ಚಿನಕಟ್ಟಿ, ಸುನೀಲ ನುಚ್ಚಿ, ನವೀನ ಜುಮನಾಳ ಮತ್ತಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

