ಚಿಮ್ಮಡ: ಗ್ರಾಮದಲ್ಲಿ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಸ್ವೀಪ್ ಸಮೀತಿ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಮತದಾರರ ಜಾಗ್ರತಿ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಇಲ್ಲಿನ ಗ್ರಾಮ ಪಂಚಾಯತಿ ಕಛೇರಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರಜಾಪ್ರಭುತ್ವ ನಮ್ಮಿಂದ, ಮತದಾನ ಮಾಡೋಣ ಹೆಮ್ಮೆಯಿಂದ. ನಮ್ಮ ನಡೆ ಮತದಾನದ ಕಡೆ ಎಂಬ ಘೋಷಣೆಗಳನ್ನು ಫಲಕ ಹಾಗೂ ಧ್ವನಿವರ್ಧಕಗಳ ಮೂಲಕ ಘೋಷಣೆ ಕೂಗುತ್ತ ಮತದಾರರಲ್ಲಿ ಖಡ್ಡಾಯ ಮತ ಚಲಾವಣೆ ಮಾಡುವ ಕುರಿತು ಜಾಗ್ರತಿ ಮೂಡಿಸಲಾಯಿತು. ನಂತರ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ ಅವರಿಂದ ಮತದಾರರ ಪ್ರತಿಜ್ಙಾವಿಧಿ ಭೋದಿಸಲಾಯಿತು.
ನಂತರ ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ನಡೆಯುವ ವಾರದ ಸಂತೆಯಲ್ಲಿ ಆಗಮಿಸಿದ ವ್ಯಾಪಾರಸ್ಥರೂ ಹಾಗೂ ಗ್ರಾಮಸ್ಥರಿಗೆ ಖಡ್ಡಾಯ ಮತದಾನ ಮಾಡುವ ಕುರಿತ ಜಾಗ್ರತಿಯ ಕರಪತ್ರ ವಿತರಿಸಿ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವಾರು ಜನ ಗ್ರಾಮಸ್ಥರು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

