Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆಯಿಂದಲೇ ಮತದಾನ: ಹಿಗ್ಗಿದ ಹಿರಿಯ ನಾಗರಿಕರು & ವಿಶೇಷ ಚೇತನರು
(ರಾಜ್ಯ ) ಜಿಲ್ಲೆ

ಮನೆಯಿಂದಲೇ ಮತದಾನ: ಹಿಗ್ಗಿದ ಹಿರಿಯ ನಾಗರಿಕರು & ವಿಶೇಷ ಚೇತನರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ೮೫ ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಜಿಲ್ಲೆಯ ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರು ತಮ್ಮ ಹಕ್ಕು ಚಲಾಯಿಸಿ ಹಿರಿ ಹಿರಿ ಹಿಗ್ಗಿದರು.
ಜಿಲ್ಲೆಯ ಲೋಕಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ ೨೭ ರಂದು ಮನೆಯಿಂದ ಮತದಾನ ಮಾಡಲು ಒಪ್ಪಿಗೆ ಪತ್ರ ನೀಡಿರುವ ೮೫ ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರ ಮನೆಗಳಿಗೆ ವೇಳಾಪಟ್ಟಿ ಮತ್ತು ರೂಟ್ ಮ್ಯಾಪ್ ಸಿದ್ದಪಡಿಸಿಕೊಂಡಿರುವ ಮತಗಟ್ಟೆ ಸಿಬ್ಬಂದಿ ತೆರಳಿ ಮತದಾನ ಪ್ರಕ್ರಿಯೆಗಳನ್ನು ನಡೆಸಿದರು.
ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯ ಕುಂಟೋಜಿ ಗ್ರಾಮದ ೭೭ ವರ್ಷದ ವಿಶೇಷ ಚೇತನರಾದ ಮಹಾದೇವಿ ಹಿರೇಮಠ ಅವರು, ಅಧಿಕಾರಿಗಳು ತಿಳಿಸಿದ ಮಾದರಿಯಲ್ಲಿಯೇ ಮತಪತ್ರವನ್ನು ಬಿಡಿಸಿ, ಮತ ಹಾಕಿ, ಸಂಬಂಧಪಟ್ಟ ಲಕೋಟೆಯಲ್ಲಿಯೇ ಮತಪತ್ರವನ್ನು ಹಾಕಿದರು. ನಂತರ ಮಾತನಾಡಿದ ಅವರು, ಕಾಲು ಮುರಿದ ಕಾರಣ ನಡೆಯಲು ಸಾಧ್ಯವಿಲ್ಲವಾಗಿದ್ದು ಮನೆ ಬಳಿಗೆ ನನ್ನ ಬಂದು ನನ್ನ ಮತ ಪಡೆದದ್ದು ‘ಬಾಳಾ ಛಲೋ ಆತ್ರಿ’ ಎಂದು, ಹೆಮ್ಮೆಯಿಂದ ಮತದಾನ ಮಾಡಿದ ತಮ್ಮ ಬೆರಳ ಗುರುತನ್ನು ತೋರಿಸಿ ಸಂಭ್ರಮಿಸಿದರು.
ಬಬಲೇಶ್ವರ ತಾಲೂಕಿನ ದದಾಮಟ್ಟಿಯ ಗ್ರಾಮದ ೯೦ ವರ್ಷದ ವಯೋವೃದ್ಧೆ ಯಲ್ಲವ್ವ ಮಾದರ, ತನಗೆ ಅನಾರೋಗ್ಯವಿದ್ದರೂ ಕುಶಿಯಿಂದ ಮತದಾನ ಮಾಡಿ, ಮನೆಯಿಂದ ಮತದಾನ ಮಾಡಿದ್ದು ಛಲೋ ಆತ್ರಿ.. ಮೊದಲು ನಮ್ಮನ್ನು ವೋಟ್ ಮಾಟೋಕೆ ಎಳಕೊಂಡು ಹೋಗ್ತಾ ಇದ್ರು, ಇವಾಗ ಕುಳಿತಲ್ಲಿಯೇ ಅಧಿಕಾರಿಗಳು ಬಂದು ಮತ ಹಾಕಿಸಿಕೊಳ್ಳಲು ಪವರ್ ಕೊಟ್ಟಿದ್ದು ಕುಶಿ ಆಗಿದೆ ಎಂದು, ತಮ್ಮ ಬೆರಳಿನ ಶಾಹಿಯನ್ನು ತೋರಿಸಿ ನಕ್ಕರು.
ಮನೆಯಿಂದ ಮತದಾನ ಮಾಡುವ ಅರ್ಹ ಮತದಾರರಿಗೆ, ಮುಂಚಿತವಾಗಿಯೇ ಸೇರಿದಂತೆ ಮತಗಟ್ಟೆ ಅಧಿಕಾರಿಗಳು ಇಂದು ಅವರ ಮನೆಗಳಿಗೆ ಭೇಟಿ ನೀಡುವ ಸಮಯ ಮತ್ತು ದಿನಾಂಕವನ್ನು ಬಿಎಲ್‌ಒಗಳ ಮುಖಾಂತರ ತಿಳಿಸಿದ್ದು, ತಾವು ಬರುವ ಸಮಯದಲ್ಲಿ ಮತದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳುವಂತೆ ತಿಳಿಸಿದ್ದರಿಂದ ಯಾವುದೇ ಗೊಂದಲಗಳಿಗೆ ಆಸ್ಪದವಾಗದೇ ಮತದಾನ ಪ್ರಕ್ರಿಯೆ ನಡೆಯಿತು.
ಮನೆಯಿಂದ ಮತದಾನ ಮಾಡುವ ಮತಗಟ್ಟೆ ಸಿಬ್ಬಂದಿಗಳ ತಂಡದಲ್ಲಿ ಸೆಕ್ಟರ್ ಅಧಿಕಾರಿ, ಪೋಲಿಂಗ್ ಅಧಿಕಾರಿಗಳು , ಮೈಕ್ರೋ ಆಬ್ಸರ್ವರ್, ಬಿ.ಎಲ್.ಒ, ಪೊಲೀಸ್ ಸಿಬ್ಬಂದಿ, ವಿಡಿಯೋಗ್ರಾಫರ್ ಗಳಿದ್ದು, ತಮಗೆ ನಿಯೋಜಿಸಿದ್ದ ಪ್ರತ್ಯೇಕ ವಾಹನದಲ್ಲಿಯೇ, ಮತದಾನ ಪ್ರಕ್ರಿಯೆಗೆ ಅಗತ್ಯವಿದ್ದ ಎಲ್ಲಾ ಪರಿಕರಗಳೊಂದಿಗೆ ನಿಯೋಜಿತ ಮನೆಗಳಿಗೆ ಭೇಟಿ ನೀಡಿದರು.
ಮನೆಯಿಂದ ಮತದಾನ ಮಾಡುವ ಕಾರ್ಯವಿಧಾನದ ಬಗ್ಗೆ ಮತದಾರ ಕುಟುಂಬದವರಿಗೆ ವಿವರಿಸಿ, ಮತದಾರನ ಮೇಲೆ ಯಾರೊಬ್ಬರೂ ಪ್ರಭಾವ ಬೀರದಂತೆ, ಮತದಾನ ಮಾಡುವ ಸಂದರ್ಭದಲ್ಲಿ ಕುಟುಂಬ ಸದಸ್ಯರನ್ನು ಮತದಾನ ಮಾಡುವ ಕೊಠಡಿಯಿಂದ ಹೊರೆಗೆ ನಿಲ್ಲಿಸಿ, ಗೋಪ್ಯತೆ ಕಾಪಾಡುವ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.