ವಿಜಯಪುರ: ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏ.೨೮ ರಂದು ಬೆಳಗ್ಗೆ ೮ ಗಂಟೆಗೆ ದರಬಾರ ಹೈಸ್ಕೂಲ್ ಆವರಣದ ಮತಗಟ್ಟೆಯಲ್ಲಿ ಚುನಾವಣಾ ಧ್ವಜಾರೋಹಣ ಹಾಗೂ ನಮ್ಮ ನಡೆ ಮತಗಟ್ಟೆ ಕಡೆ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ ೮ ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಧ್ವಜಾರೋಹಣ ನೇರವೇರಿಸಿ ಮತದಾನ ಜಾಗೃತಿ ಕುರಿತು ಸಂದೇಶ ನೀಡಿ, ಸಹಿ ಅಭಿಯಾನ ನಡೆಸುವರು.
ಕಾರ್ಯಕ್ರಮದಲ್ಲಿ ಚುನಾವಣಾ ವೀಕ್ಷಕರಾದ ಡಾ. ರತನ್‌ಕನ್ವರ್ ಎಚ್. ಗಡವಿಚರಣ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಉಪಸ್ಥಿತರಿರಲಿದ್ದಾರೆ.
ಅಂದು ಬೆಳಗ್ಗೆ ೭.೧೫ರಿಂದ ಕಂದಗಲ್ ಹನುಮಂತರಾಯ ರಂಗಮಂದಿರ ಆವರಣದಿಂದ ದರಬಾರ ಹೈಸ್ಕೂಲ್ ಒಳ ಆವರಣದ ವರೆಗೆ ವಿವಿಧ ಕಲಾ ತಂಡ ಮತ್ತು ವಾದ್ಯಮೇಳದವರೊಂದಿಗೆ ಮೆರವಣಿಗೆ ನಡೆಯಲಿದೆ. ಚುನಾವಣೆ ಜಾಗೃತಿ ನಿಮಿತ್ಯ ಏರ್ಪಡಿಸಲಾದ ರಂಗೋಲಿ ಸ್ಪರ್ದೆಯ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಣೆ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
