ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.೨ ರ ದರ್ಗಾ ರಸ್ತೆಯಲ್ಲಿರುವ ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯಕ್ಕೆ ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿ. ನಿದೇರ್ಶಕರಾದ ರಾಮನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಭೇಟಿ ನೀಡಿದ ಬಿಜೆಪಿ ನಗರ ಮಂಡಲ ಪದಾಧಿಕಾರಿಗಳು ವಿಜಯಪುರ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ಮತಯಾಚಿಸಿದರು.
ಈ ವೇಳೆ ಮಾತನಾಡಿದ ಅವರು, ಭಾರತ ದೇಶವನ್ನು ವಿಶ್ವಗುರು ಆಗಿ ಮಾಡುವ ಶಕ್ತಿ ಪ್ರಧಾಮಮಂತ್ರಿಗಳಾದ ಮೋದಿಯವರಿಂದ ಮಾತ್ರ ಸಾಧ್ಯ. ಹೀಗಾಗಿ ಇಡೀ ದೇಶ ಅವರನ್ನು ಬೆಂಬಲಿಸುತ್ತಿದೆ. ಅವರು ಮತ್ತೆ ಪ್ರಧಾನಿಯಾದರೆ ದೇಶ ಸುರಕ್ಷಿತವಾಗಿರುವುದಲ್ಲದೆ, ಅಭಿವೃದ್ಧಿ ಪಥದತ್ತ ದೇಶ ಸಾಗಲಿದೆ. ಹೀಗಾಗಿ ನಾವು ನಮ್ಮ ಜಿಲ್ಲೆಯಿಂದ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಿ ಕಳಿಸೋಣ ಎಂದರು.
ರಾಜಯೋಗಿನಿ ಬ್ರಹ್ಮಕುಮಾರಿ ಸರೋಜಾ ಅಕ್ಕ, ರಾಜ ಯೋಗಿ ಬ್ರಹ್ಮಕುಮಾರ ಗಂಗಾಧರ ಅಣ್ಣ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಂಕರ ಹೂಗಾರ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹಾಗೂ ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಪರಿವಾರದ ದೈವಿ ಸಹೋದರ, ಸಹೋದರಿಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

