Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭವಿಷ್ಯದ ಆಲೋಚನೆಯೊಂದಿಗೆ ಕಡ್ಡಾಯವಾಗಿ ಮತ ಚಲಾಯಿಸಿ :ಡಿಸಿ ಭೂಬಾಲನ್
(ರಾಜ್ಯ ) ಜಿಲ್ಲೆ

ಭವಿಷ್ಯದ ಆಲೋಚನೆಯೊಂದಿಗೆ ಕಡ್ಡಾಯವಾಗಿ ಮತ ಚಲಾಯಿಸಿ :ಡಿಸಿ ಭೂಬಾಲನ್

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೋಕಸಭಾ ಚುನಾವಣೆ-೨೦೨೪ | ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮಕ್ಕೆ ಚಾಲನೆ

ವಿಜಯಪುರ: ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಭವಿಷ್ಯದ ಆಲೋಚನೆಯೊಂದಿಗೆ ಪ್ರತಿಯೊಬ್ಬರು ಮೇ.೭ ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ದರಬಾರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ “ನಮ್ಮ ನಡೆ ಮತಗಟ್ಟೆ ಕಡೆ” ಕಾರ್ಯಕ್ರಮದಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ, ಮತದಾನದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ ಇಂತಹ ಅವಕಾಶ ಸಂವಿಧಾನ ಕಲ್ಪಿಸಿದೆ. ಸಂವಿಧಾನ ನೀಡಿದ ಅಧಿಕಾರವನ್ನು ಕಳೆದುಕೊಳ್ಳಬಾರದು. ಮತದಾನ ಮಾಡುವ ಮುಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸಬೇಕು. ೧೮ ವರ್ಷ ತುಂಬಿದ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಹೇಳಿದರು.
ನಮ್ಮ ದೇಶವನ್ನು ೫ ವರ್ಷಗಳ ಕಾಲ ಆಡಳಿತ ನಡೆಸುವ ಸರ್ಕಾರದ ಆಯ್ಕೆ ನಮ್ಮ ಕೈಯಲ್ಲಿದೆ. ಸಂವಿಧಾನ ನೀಡಿದ ಮತದಾನದ ಹಕ್ಕಿನಿಂದ ಯಾರೂ ಕೂಡ ವಂಚಿತರಾಗದೇ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ದಿನ ಮತಗಟ್ಟೆಗಳಿಗೆ ತೆರಳಿ ಮುಂದಿನ ಭವಿಷ್ಯದ ಆಲೋಚನೆಯೊಂದಿಗೆ ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ ಎಲ್ಲ ಮತಗಟ್ಟೆಗಳಲ್ಲಿ ಬಿಸಿಲಿನ ರಕ್ಷಣೆಗಾಗಿ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗಾಗಿ ರ್ಯಾಂಪ್, ಅಶಕ್ತರಿಗೆ ವ್ಹೀಲ್ ಚೇರ್ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಮತದಾನ ಪ್ರಮಾಣ ಹೆಚ್ಚಿಸುವ ಗುರಿ ಹೊಂದಲಾಗಿದೆ. ಗ್ರಾಮಿಣ ಹಾಗೂ ನಗರ ಪ್ರದೇಶದಲ್ಲಿ ಕಳೆದ ಚುನಾವಣೆಳಲ್ಲಿ ಅತಿ ಕಡಿಮೆ ಮತದಾನವಾದ ಪ್ರದೇಶಗಳನ್ನು ಗುರುತಿಸಿ, ಈ ಸ್ಥಳಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಿ ಹೆಚ್ಚಿನ ಮತದಾನಕ್ಕೆ ಕ್ರಮ ವಹಿಸಲಾಗುತ್ತಿದೆ. ನೋಟಾ ಮತಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ಮೇ ೦೭ರಂದು ಮತದಾನ ನಡೆಯಲಿದೆ. ಎಲ್ಲ ಕುಟುಂಬದವರು ಅರ್ಹ ಮತದಾರರೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿಕೊಂಡ ಅವರು, ಮತದಾನದ ಹಕ್ಕು ಅತ್ಯಂತ ಪವಿತ್ರ ಹಾಗೂ ಅಮೂಲ್ಯವಾದದ್ದು ಹಾಗೂ ಪವಿತ್ರವಾದದ್ದು, ಉತ್ತಮ ಸಮಾಜ, ಸುಭದ್ರ ದೇಶ ನಿರ್ಮಾಣದಲ್ಲಿ ಪ್ರತಿಯೊಬ್ಬರ ಮತ ಅತ್ಯಅಮೂಲ್ಯ ಹಾಗಾಗಿ ಯಾರೂ ಕೂಡ ನಿರ್ಲಕ್ಷ್ಯ ಭಾವನೆ ತೋರದೆ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಮತದಾನದ ಮೌಲ್ಯವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮ ಪಂಚಾಯತ್ ಸೇರಿದಂತೆ ನಗರ ಮಟ್ಟದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ನಮ್ಮದು. ಇಂತಹ ದೇಶದದಲ್ಲಿ ಜನಿಸಿದ ಪ್ರತಿಯೊಬ್ಬ ನಾಗರಿಕನೂ ಪುಣ್ಯವಂತ. ಉತ್ತಮ ಪ್ರಜಾಪ್ರಭುತ್ವ ಹೊಂದಿರುವ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ನಿಭಾಯಿಸಲು ಮತದಾನ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಮತದಾನ ಹಬ್ಬದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದ ಅವರು, ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ರಚಿಸಿದ ಮತದಾರರ ಜಾಗೃತಿ ಗೀತೆಯನ್ನು ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಸಾಕ್ಷಿ ಹಿರೇಮಠ ಹಾಡಿದರು. ಎಲ್ಲರೂ ಮತದಾನ ಜಾಗೃತಿ ಕುರಿತು ಘೋಷಣೆಗಳನ್ನು ಕೂಗಿದರು. ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಹಮ್ಮಿಕೊಂಡ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಇದಕ್ಕೂ ಮೊದಲು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಿಂದ ಆರಂಭಗೊಂಡ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ಆಶಾದ ಉರ್ ರೆಹಮಾನ ಶರೀಫ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಾಗೃತಿ ಜಾಥಾ ಅಭಿಯಾನವು ವಿವಿಧ ವಾದ್ಯ ಮೇಳದೊಂದಿಗೆ ದರಬಾರ ಶಿಕ್ಷಣ ಸಂಸ್ಥೆ ಆವರಣದರೆಗೆ ಸಾಗಿತು.
ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಡಾ. ರತನ್ ಕನ್ವರ್ ಹೆಚ್. ಗಧವಿಚರಣ, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ ಆರ್ ಮುಂಡರಗಿ, ಉಪಕಾರ್ಯದರ್ಶಿ ಬಿ ಎಸ್ ಮೂಗನೂರಮಠ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಪ್ರೀತಮ್ ನಸಲಾಪುರ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಗಳಾದ ರಾಜೇಶ್ ಪವಾರ, ಸಹನಾ ಕುಡಿಗನೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜ್ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.