ಬಸವನಬಾಗೇವಾಡಿ: ಚುನಾವಣೆಯ ಆಯೋಗ ನೀಡಿದ ಮಾರ್ಗದರ್ಶಿಯಂತೆ ಚುನಾವಣೆಗೆ ನಿಯುಕ್ತಿಗೊಂಡ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಲೋಕಸಭೆ ಚುನಾವಣೆಯು ಸುಸೂತ್ರವಾಗಿ ನಡೆಯುವಂತೆ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಸಾರ್ವತ್ರಿಕ ಲೋಕಸಭಾ ಚುನಾವಣೆಯ ಜನರಲ್ ಅಬ್ಜರರ್ವರ್ (ಸಾಮಾನ್ಯ ವೀಕ್ಷಕ)ಡಾ.ರತನಕಣ್ವರ್ ಗಾಧವಿಚಾರನ ಹೇಳಿದರು.
ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿರುವ ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಇರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಚುನಾವಣೆಯ ಮತದಾನ ದಿನ ಯಾವುದೇ ರೀತಿಯಲ್ಲಿ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಮತಯಂತ್ರಗಳಲ್ಲಿ ರಿಪೇರಿ ಕಂಡು ಬಂದರೆ ತಕ್ಷಣವೇ ಸೆಕ್ಟರ್ ಅಧಿಕಾರಿಗಳು ತ್ವರಿತವಾಗಿ ಅದನ್ನು ರಿಪೇರಿ ಮಾಡುವ ಕ್ರಮ ತೆಗೆದುಕೊಂಡು ಮತದಾನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯು ಸುಗಮವಾಗಿ ನಡೆಯುವಂತೆ ಎಲ್ಲ ಅಧಿಕಾರಿಗಳ ತಂಡ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದರು.
ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ., ಬಸವನಬಾಗೇವಾಡಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಬಸವನಬಾಗೇವಾಡಿ ತಾಲೂಕು ಪಂಚಾಯಿತಿ ಪ್ರಭಾರಿ ಇಓ ಪ್ರಕಾಶ ದೇಸಾಯಿ, ನಿಡಗುಂದಿ ತಹಸೀಲ್ದಾರ ನೀಲಪ್ರಭಾ, ಡಿವೈಎಸ್ಪಿ ಬಾಳಪ್ಪ ನಂದಗಾವಿ, ಅಬಕಾರಿ ಇಲಾಖೆಯ ಅಬಕಾರಿ ನಿರೀಕ್ಷಕ, ೨೧ ಸೆಕ್ಟರ್ ಅಧಿಕಾರಿಗಳು ಭಾಗವಹಿಸಿದ್ದರು.
ವಿವಿಧ ಮತಗಟ್ಟೆಗಳಿಗೆ ಭೇಟಿಃ ಸಭೆಯ ನಂತರ ಮತಕ್ಷೇತ್ರದಲ್ಲಿರುವ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಾಗೂರ ಗ್ರಾಮದಲ್ಲಿರುವ ಮತಗಟ್ಟೆ ಕೇಂದ್ರ ಹಾಗೂ ಮಸಬಿನಾಳ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಗ್ರಾಮದ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಲಭ್ಯಗಳ ಕುರಿತು ಜನರಲ್ ಅಬ್ಜರರ್ವರ್ ಡಾ.ರತನಕಣ್ವರ್ ಗಾಧವಿಚಾರನ ಪರಿಶೀಲನೆ ಮಾಡಿದರು. ಇದೇ ಸಂದರ್ಭದಲ್ಲಿ ಮತದಾನ ಜಾಗೃತಿ ಅಭಿಯಾನಗಳ ಆಲ್ಬಮ್ ಛಾಯಾಚಿತ್ರಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಆಯಾ ಪಂಚಾಯಿತಿ ಪಿಡಿಓ, ಬಿಎಲ್ಓ, ಸಾರ್ವಜನಿಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

