ಇಂಡಿ: ಪಕ್ಷಾತೀತವಾಗಿ ಸಮಾಜದ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲುತ್ತದೆ. ಇವು ರಾಷ್ಟ್ರಕ್ಕೆ ಮಾದರಿಯಾದ ಯೋಜನೆಗಳಾಗಿವೆ‘ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವಿದ ಮೋಮಿನ ಹೇಳಿದರು.
ಪಟ್ಟಣದ ವಾರ್ಡ್ ನಂ 16 ಗೋಡವಾಣ ಗಲ್ಲಿ ಹಾಗೂ ಕಾಲೆಪ್ಲಾಟ ನಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಹಾಗೂ ಗ್ಯಾರಂಟಿ ಯೋಜನೆಗಳ ಪತ್ರ ವಿತರಣೆ ಮಾಡಿ ಮತಯಾಚನೆ ಮಾಡಿ ಮಾತನಾಡಿದರು.
‘₹56 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಜನರ ಬಾಗಿಲಿಗೆ ತಲುಪಿಸಲಾಗಿದೆ. ಇನ್ನೂ ಹೆಚ್ಚಿನ ಗ್ಯಾರಂಟಿ ಯೋಯೋಜನೆಗಳಿಗಾಗಿ ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜೂ ಆಲಗೂರ ಅವರನ್ನು ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು‘ ಎಂದು ಮನವಿ ಮಾಡಿದರು.
ಬಿಜೆಪಿ ಪಕ್ಷ ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗ ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ’ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.?
ವಾರ್ಡ ಸದಸ್ಯ ಅಸ್ಲಮ ಕಡಣಿ ಮಾತನಾಡಿ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ನುಡಿದಂತೆ ನಡೆದಿದೆ. 5 ಗ್ಯಾರೆಂಟಿ ಯೋಜನೆ ಗೃಹ ಲಕ್ಷ್ಮಿ , ಶಕ್ತಿ, ಗೃಹ ಜ್ಯೋತಿ , ಯುವನಿಧಿ, ಅನ್ನಭಾಗ್ಯ ಯೋಜನೆಯಡಿ 5 ಕೆ ಜಿ ಅಕ್ಕಿ ಮತ್ತು ಉಳಿದ 5 ಕೆ,ಜಿ ಅಕ್ಕಿಯ ಬದಲಾಗಿ ಹಣ ನೇರವಾಗಿ ಅವರಖಾತೆಗೆ ಹಣ ಜಮಾವಣೆ ಇಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ‘ ಎಂದು ತಿಳಿಸಿದರು.
‘ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ ₹1ಲಕ್ಷ ,ರೈತರ ಸಾಲ ಮನ್ನಾ , ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ’ ಎಂದು ತಿಳಿಸಿದರು.
ಕಾಂಗ್ರೆಸ್ ಯುವ ಮುಖಂಡ ಹಸನ ಮುಜಾವರ ಮಾತನಾಡಿ ‘ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರು ಬೂತ್‌ಮಟ್ಟದಲ್ಲಿ ತಾವೇ ಅಭ್ಯರ್ಥಿ ಎಂದು ಭಾವಿಸಿ ಚುನಾವಣೆ ಎದುರಿಸಬೇಕು‘ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಬ್ದುಲ ಕರೀಮ ಬೆನೂರ, ಉಸ್ಮಾನ ತಂಬೂಳಿ, ನಾಗು ದಶವಂತ, ಸುಲೆಮಾನ ಬೇನೂರ, ಜಮೀರ ಬಾಗವಾನ, ಹಸನ ಬೇನುರ, ರಿಯಾಜ ಬಾಗವಾನ ಇನ್ನೂ ಅನೇಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿ ಯೋಜನೆಗಳು :ಮೋಮಿನ
Related Posts
Add A Comment
