ಮುದ್ದೇಬಿಹಾಳ: ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯಲು ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪರಶುರಾಮ ವನಹಳ್ಳಿ ಹೇಳಿದರು.
ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಗ್ರಾ.ಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಕಾರ್ಯಮದಲ್ಲಿ ಅವರು ಮಾತನಾಡಿದರು.
ದೇಶದ ಅಡಳಿತಕ್ಕೆ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗಿದೆ. ಈ ಹಕ್ಕನ್ನು ಯಾರೂ ಕಳೆದುಕೊಳ್ಳದೇ ಕಡ್ಡಾಯವಾಗಿ ಮಾತದಾನ ಮಾಡಿ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯಬೇಕು ಎಂದರು.
ಗ್ರಾಮದ ಪ್ರತೀ ವಾರ್ಡಗೂ ಸಂಚರಿಸಿ ಮತದಾನದ ಜಾಗೃತಿ ಮೂಡಿಸಲಾಯಿತು. ಈ ವೇಳೆ ಕಾರ್ಯದರ್ಶಿ ಗಿರೀಶ ಬಿರಾದಾರ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಶಾಲಾ ಶಿಕ್ಷಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

