ಮತದಾನ ದಿನ ಮತ್ತು ಮತದಾನದ ಪೂರ್ವ ದಿನ ಮುದ್ರಣ ಮಾಧ್ಯಮದ ಜಾಹಿರಾತಿಗೆ ನಿಯಮ
ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ ೬ ಹಾಗೂ ೭ ರಂದು ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಸಂಸ್ಥೆಗಳು ಅಥವಾ ಏಜೆಂಟರು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹಿರಾತು ಪ್ರಕಟಿಸಲು ಪೂರ್ವಾನುಮತಿ ಕಡ್ಡಾಯವಾಗಿರುತ್ತದೆ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಜಾಹಿರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣಿಕರಣ ಹಾಗೂ ಮಾಧ್ಯಮ ಕಣ್ಗಾವಲು ಸಮಿತಿ (ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿರುತ್ತದೆ..
ಚುನಾವಣಾ ಜಾಹಿರಾತು ಪ್ರಕಟಣೆ ಮಾಡ ಬಯಸುವ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಸಂಸ್ಥೆಗಳು ಅಥವಾ ಏಜೆಂಟರು ಮೇ ೬ ಹಾಗೂ ೭ ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹಿರಾತು ಪ್ರಕಟಿಸಬೇಕೆಂದಲ್ಲಿ ಅಂತಹ ಜಾಹಿರಾತಿನ ಎರಡು ಸ್ವ-ದೃಡಿಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ ೪ ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣಿಕರಣ ಹಾಗೂ ಮಾಧ್ಯಮ ಕಣ್ಗಾವಲು ಸಮಿತಿ (ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಬೇಕು. ಪೂರ್ವಾನುಮತಿ ಅರ್ಜಿ ನಮೂನೆಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಜಿಲ್ಲಾ ಎಂಸಿಎಂಸಿ ಸಮಿತಿಯಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
