ಬಸವನಬಾಗೇವಾಡಿ: ವಿಜಯಪುರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ ಲೋಕಸಭಾ ಚುನಾವಣಾ ಪ್ರಚಾರಾರ್ಥವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮೇ. ೪ ರಂದು ಸಂಜೆ ೪ ಗಂಟೆಗೆ ಬಸವನಬಾಗೇವಾಡಿ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಹೇಳಿದರು.
ಪಟ್ಟಣದ ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಅವರ ನಿವಾಸದಲ್ಲಿ ಗುರುವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ರೋಡ್ ಶೋದೊಂದಿಗೆ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಗಣಪತಿ ವೃತ್ತ, ಬಸವೇಶ್ವರ ವೃತ್ತ, ಬಸ್ ನಿಲ್ದಾಣದವರೆಗೆ ತೆರಳಿ ಬಸವೇಶ್ವರ ವೃತ್ತದ ಮಾರ್ಗವಾಗಿ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರಚಾರ ಕಾರ್ಯಕ್ರಮ ಮುಕ್ತಾಯವಾಗಲಿದೆ. ರಾಣಿ ಚನ್ನಮ್ಮ ವೃತ್ತದಲ್ಲಿ ತೆರೆದ ವಾಹನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಚಾರ ಭಾಷಣ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅಭ್ಯರ್ಥಿ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಈ ರೋಡ್ ಶೋ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ಎಲ್ಲ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈಗಾಗಲೇ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ಎಲ್ಲ ಕಾರ್ಯಕರ್ತರು ಜಂಟಿಯಾಗಿ ಅಭ್ಯರ್ಥಿ ಪರ ಪ್ರಚಾರ ಮಾಡಲಾಗುತ್ತಿದೆ. ರಮೇಶ ಜಿಗಜಿಣಗಿ ಅವರು ಜಿಲ್ಲೆಯಲ್ಲಿ ೧ ಲಕ್ಷ ಕೋಟಿ ರೂ. ಅನುದಾನದ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವರು ಪ್ರಚಾರ ಬಯಸದ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದಾರೆ. ಅವರು ಎಲ್ಲ ಸಮಾಜ ಬಾಂಧವರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಇಂತಹ ಕೆಲಸಗಾರ ಅಭ್ಯರ್ಥಿಯನ್ನು ಮತದಾರರು ರಾಜ್ಯದಲ್ಲಿಯೇ ಅತಿ ಹೆಚ್ಚಿನ ಮತಗಳ ಅಂತರದಿಂದ ಈ ಸಲದ ಲೋಕಸಭೆ ಚುನಾವಣೆಯಲ್ಲಿ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.
ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಬೆಳ್ಳುಬ್ಬಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಮತಕ್ಷೇತ್ರದ ಚುನಾವಣಾ ಉಸ್ತುವಾರಿ ಬಸವರಾಜ ಬಿರಾದಾರ, ಬಿಜೆಪಿ ಮಂಡಳ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ, ಮುಖಂಡರಾದ ಬಿ.ಕೆ.ಕಲ್ಲೂರ, ಶಂಕರಗೌಡ ಪಾಟೀಲ, ಕಲ್ಲು ಸೊನ್ನದ, ಎಸ್.ಎ.ಯರನಾಳ, ಬಸವರಾಜ ಬಿಜಾಪುರ, ರಾಜು ಮುಳವಾಡ, ರವಿ ಪಟ್ಟಣಶೆಟ್ಟಿ, ಕೆ.ಬಿ.ನಡಕಟ್ಟಿ, ಎಸ್.ಎಸ್.ಹಿರೇಮಠ, ಸುರೇಶ ಚಿಂಚೋಳಿ, ಮಲ್ಲಿಕಾರ್ಜುನ ಅವಟಿ, ಸಂಗಯ್ಯ ಕಂದಗಲ್ಲಮಠ, ಅಣ್ಣುಗೌಡ ಗುಜಗೊಂಡ ಇತರರು ಇದ್ದರು.
Subscribe to Updates
Get the latest creative news from FooBar about art, design and business.
ನಾಳೆ ಬಿಜೆಪಿ ಅಭ್ಯರ್ಥಿ ಪರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಚಾರ
Related Posts
Add A Comment

