ಮುದ್ದೇಬಿಹಾಳ: ತಾಲೂಕಿನ
’ಉದಯರಶ್ಮಿ’ ಹಾಗೂ ’ಸಂಯುಕ್ತ ಕರ್ನಾಟಕ’ ದಿನಪತ್ರಿಕೆಗಳ ವರದಿಗಾರ ಮತ್ತು ನ್ಯಾಯವಾದಿ ಚೇತನ ಶಿವಶಿಂಪಿ ಅವರ ತಂದೆ ಮಹಾದೇವಪ್ಪ ಗುರುಬಸಪ್ಪ ಶಿವಶಿಂಪಿ (೬೪) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಪತ್ರಕರ್ತ ಚೇತನ ಶಿವಶಿಂಪಿ ಸೇರಿದಂತೆ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಭಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಅಹಿಲ್ಯಾಬಾಯಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ, ನಿವೃತ್ತ ಡಿವಾಯ್‌ಎಸ್‌ಪಿ ಎಸ್.ಎಸ್.ಹುಲ್ಲೂರ, ಬಾಲಾಜಿ ಶುಗರ್ಸ್ ನ ರಾಹುಲಗೌಡ ಪಾಟೀಲ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಜ್ಯ ಸಮಿತಿ ಸದಸ್ಯ ಡಿ.ಬಿ.ವಡವಡಗಿ, ನಿವೃತ್ತ ನ್ಯಾಯಾಧೀಶ ಜಿ.ಡಿ.ಇನಾಮದಾರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ, ಹಿರಿಯ ನ್ಯಾಯವಾದಿಗಳಾದ ವಿ.ಎಂ.ನಾಗಠಾಣ, ಜೆ.ಎ.ಚಿನಿವಾರ, ಎಸ್.ಎಂ.ಗುಡದಿನ್ನಿ, ಎಂ.ಎಸ್.ನಾವದಗಿ, ಆರ್.ಬಿ.ಪಾಟೀಲ, ಎಂ.ಎಚ್.ಕ್ವಾರಿ, ಬಿ.ಎ.ನಾಡಗೌಡರ, ಎಂ.ಎ.ಮುದ್ದೇಬಿಹಾಳ ಸೇರಿ ತಾಲೂಕಿನ ಎಲ್ಲ ಪತ್ರಕರ್ತರು ಹಾಗೂ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಹಾಗೂ ’ಉದಯರಶ್ಮಿ’ ದಿನಪತ್ರಿಕೆ ಬಳಗ ಸಂತಾಪ ಸೂಚಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

