ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಅವರಿಗೆ ಅಭಿವೃದ್ಧಿ ಎಂದರೆ ಅಸಡ್ಡೆಯಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಬಬಲೇಶ್ವರ ತಾಲೂಕಿನ ದೇವರ ಗೆಣ್ಣೂರ ಮತ್ತು ಗುಣದಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.
ಅಭಿವೃದ್ಧಿ ನಮ್ಮ ಮೂಲಮಂತ್ರ. ಅದು ನಿತ್ಯ ನಿರಂತರವಾಗಿದೆ. ಕೋಮು ಭಾವನೆ ಕೆರಳಿಸುವವರಿಗೆ ತಕ್ಕ ಪಾಠ ಕಲಿಸಲು ಸರ್ವ ಜನಾಂಗದ ಶಾಂತಿಯ ತೋಟದ ಪಣತೊಟ್ಟಿರುವ ಕಾಂಗ್ರೆಸ್ಸನ್ನು ಬೆಂಬಲಿಸಿ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಅವರು ಹೇಳದರು.
ಶಾಸಕ ಸಂಸದರಾದವರು ತಮ್ಮ ಅಧಿಕಾರವಧಿಯಲ್ಲಿ ಕನಿಷ್ಠ ಶೇ. 80 ರಷ್ಟಾದರೂ ಕೆಲಸ ಮಾಡಬೇಕು. ಆದರೆ, ಶೂನ್ಯ ಅಭಿವೃದ್ಧಿ ಮಾಡಿರುವವರಿಗೆ ತಕ್ಕ ಪಾಠ ಕಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕ್ರೀಯಾಶೀಲರಾಗಿದ್ದು, ಬಹುಭಾಷೆ ಬಲ್ಲವರಾಗಿದ್ದಾರೆ. ಇಂಥ ವಿದ್ಯಾವಂತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಅವರು ಹೇಳಿದರು.
ನರೇಂದ್ರ ಮೋದಿ ಅವರಿಗೆ 10 ವರ್ಷ ಅವಕಾಶ ನೀಡಿದ್ದು ಜನರಿಗ ಸಾಕು ಎನಿಸಿದೆ. ಹೀಗಾಗಿ ಅವರಿಗೆ ಈಗ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ಭರವಸೆ ಮೂಡಿದೆ. ಮತದಾರರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಬಿಜೆಪಿಗೆ ತಕ್ಕಪಾಠ ಕಲಿಸಲು ಸನ್ನದ್ಧರಾಗಿದ್ದಾರೆ ಎಂದು ಅವರು ಹೇಳಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ವಿ. ವಿ. ಅರಕೇರಿ, ಡಾ. ಶಂಕ್ರಯ್ಯ ಹಿರೇಮಠ ಮಾತನಾಡಿದರು.
ಈ ಸಂದರ್ಭದಲ್ಲಿ ವಿ. ಎಚ್. ಬಿದರಿ, ಅಕ್ಬರ ಬಿದರಿ, ಅರುಣ ಶಿರಬೂರ, ಬಾಬು ಗಡದಾನ, ಆಶಾ ಕಟ್ಟಿಮನಿ, ಶಂಕರಗೌಡ ಪಾಟೀಲ, ಟಿ. ಆರ್. ಪಚ್ಚೆಣ್ಣವರ, ಸುರೇಶಗೌಡ ಪಾಟೀಲ, ಪ್ರಕಾಶ ಸೊನ್ನದ, ಮೈಬೂಬಸಾಬ ರಾಂಪುರ, ಶಿವಪ್ಪ ಮಗಾರಿ, ಸುರೇಶ ಕುರಿ, ಗೋಪಾಲ ಬಾವಿಮನಿ ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

