ದೇವರಹಿಪ್ಪರಗಿ: ಬಿಜೆಪಿ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ವಿಜಯಪುರ ಮತಕ್ಷೇತ್ರದ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ರೋಡ್ ಶೋ ಕೈಗೊಂಡು ಮತಯಾಚನೆ ಮಾಡಲಿದ್ದಾರೆ.
ಪಟ್ಟಣದ ಅಂಬೇಡ್ಕರ್ ವೃತ್ತದ ಮೂಲಕ ಶನಿವಾರ(ಇಂದು) ೮.೩೦ ಗಂಟೆಗೆ ಆರಂಭಗೊಳ್ಳುವ ರೋಡ್ ಶೋ ಮೊಹರೆ ಹಣಮಂತ್ರಾಯ ವೃತ್ತ, ಮೇನ್ ಬಜಾರ್, ಪತ್ತಾರಕಟ್ಟಿ, ಬೇವಿನಕಟ್ಟಿ ಮಾರ್ಗವಾಗಿ ಸಾಗಿ ಕರಿದೇವರ ದೇವಸ್ಥಾನದ ಮುಂಭಾಗದಲ್ಲಿ ಸಮಾವೇಶಗೊಳ್ಳಲಿದೆ. ಇಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ, ಶಾಸಕ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ), ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕುಚಬಾಳ) ಸೇರಿದಂತೆ ಜಿಲ್ಲಾ ಪ್ರಮುಖರು ಮಾತನಾಡಿ ಮತಯಾಚನೆ ಮಾಡಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಮೇಶ ಮಸಬಿನಾಳ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

