ವಿಜಯಪುರ: ವಿಜಯಪುರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಮೇ.೨೦ ರಂದು ಬೆಳಗ್ಗೆ ೧೧ ಗಂಟೆಗೆ ನೇರ ಸಂದರ್ಶನ ಕರೆಯಲಾಗಿದೆ.
ಅಭ್ಯರ್ಥಿಗಳು ೧೦ನೇ ತರಗತಿ ಉರ್ತ್ತಿಣರಾಗಿರಬೇಕು, ಕನಿಷ್ಠ ೧೮ ವರ್ಷ ದಾಟಿರಬೇಕು, ಸಂಹವನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿದವರಿಗೆ ಆಧ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ಕೊಡಲಾಗುವುದು.
ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ ಹೊಂದಿರುವ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ರೈಲ್ವೇ ಸ್ಟೇಶನ್ ರಸ್ತೆಯಲ್ಲಿನ ಗೋಲಗುಂಬಜ್ ಬಳಿ ಇರುವ ಅಂಚೆ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುಹುದು ಎಂದು ಅಂಚೆ ಅಧೀಕ್ಷರಾದ ಜಿ.ಬಿ. ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
