ಚಡಚಣ: ತಾವೆಲ್ಲ ಚುನಾವಣೆ ದಿನ ಯಾರು ಕೂಡ ಮತದಾನದಿಂದ ಹಿಂದೆ ಉಳಿಯದೆ ನಿಮ್ಮ ಮತ ನಿಮ್ಮ ಹಕ್ಕು ತಪ್ಪದೇ ಮತ ಚಲಾಯಿಸಿ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕುಲದೀಪ ವ್ಹಿಪಿ ರವರು ಮತದಾರರಿಗೆ ಕರೆ ನೀಡಿದರು.
ಚಡಚಣ ತಾಲೂಕು ಸ್ವೀಪ್ ಸಮಿತಿ ಹಾಗೂ ರೇವತಗಾಂವ ಗ್ರಾಪಂ ವತಿಯಿಂದ ಗುರುವಾರದಂದು ಹಾಲಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಬಾರಿ ಮತದಾನ ಹೆಚ್ಚಳದ ಗುರಿಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಗ್ರಾಮದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಮತದಾನ ಅನುಷ್ಠಾನ ಯೋಜನೆ ರೂಪಿಸಿ, ಪರಿಣಾಮಕಾರಿಯಾಗಿ ನೂರಕ್ಕೆ ನೂರರಷ್ಟು ಮತದಾನ ಮಾಡಬೇಕೆಂದು ಹೇಳಿದರು.
ನಂತರ ಗ್ರಾಮದಲ್ಲಿ ೮೫ ವರ್ಷ ಮೇಲ್ಪಟ್ಟ ಮತದಾರರು ಮತ ಚಲಾಯಿಸಿದ ಮತದಾರರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಅಲ್ಲದೇ ಬರಗಾಲದ ಕುಡಿಯುವ ನೀರಿನ ಸಮಸ್ಯೆ ಅರಿಯಲು ಅಡವಿ ವಸ್ತಿಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ಅರಿತು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿಸಲು ಸೂಕ್ತಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳ ಗಮನಕ್ಕೆ ತಂದು ಬೇಗನೆ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುವುದು ಎಂದು ಹೇಳಿದರು.
ಈ ವೇಳೆಯಲ್ಲಿ ಗ್ರಾಪಂ ಪಿಡಿಓ ದೇವೇಂದ್ರ ವಾಗ್ಮೋಡೆ, ಕಾರ್ಯದರ್ಶಿ ಮಾದಣ್ಣ ಪೂಜಾರಿ, ಲೆಕ್ಕ ಸಹಾಯಕ ಲಾಯಪ್ಪ ಲೋಣಿ, ವಿಆರ್‌ಡಬ್ಲ್ಯೂ ಎಸ್.ಎಂ.ಮಾಳಿ ಸೇರಿದಂತೆ ಗ್ರಾಪಂ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

