ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ಮೇ.೭ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಎಲ್ಲಾ ೨೦೮೫ ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ಹಿನ್ನಲೆಯಲ್ಲಿ ಮೆ.೫ ರ ಸಂಜೆ ೬ ರಿಂದ ಮೇ ೭ ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಕಲಂ ೧೪೪ ಪ್ರತಿಭಂದಕಾಜ್ಞೆ ಜಾರಿ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಮೇ ೫ ರಂದು ಸಂಜೆ ೬ ರಿಂದ ಮತದಾನ ಮುಗಿಯವವರೆಗೂ ೫ಕ್ಕಿಂತ ಹೆಚ್ಚು ಜನರು ಗುಂಪು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರಗಿಸುವುದು ನಿಷೇಧಿಸಿದೆ. ಅದಲ್ಲದೇ, ಶಸ್ತ್ರಾಸ್ತಗಳನ್ನು ತೆಗೆದುಕೊಂಡು ಸಂಚರಿಸುವುದು, ಮತಗಟ್ಟೆಗಳ ೧೦೦ ಮೀಟರ್ ಸುತ್ತಮುತ್ತ ರಾಜಕೀಯ ಪಕ್ಷಗಳ ಪೋಸ್ಟರ್, ಬ್ಯಾನರ್ ಹಾಗೂ ಪ್ರಚಾರ, . ಸಾರ್ವಜನಿಕವಾಗಿ ಪ್ರಚೋಧನಕಾರಿ ಹೇಳಿಕೆ, ವ್ಯಕ್ತಿಗಳ ತೇಜೋವಧೆ, ಮತಗಟ್ಟೆಯ ಸುತ್ತಮುತ್ತ ಧ್ವನಿವರ್ಧಕಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿಸಲಾಗಿದೆ.
ಮೇ ೬, ೭ ರಂದು ಸಂತೆ , ಜಾತ್ರೆ , ಉತ್ಸವ ನಿಷೇಧ
ವಿಜಯಪುರ ಮೇ ೪ (ಕರ್ನಾಟಕ ವಾರ್ತೆ): ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ೨೦೮೫ ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ದೃಷ್ಟಿಯಿಂದ ಮತದಾನದ ಹಿಂದಿನ ದಿನ ಮೇ.೬ ಹಾಗೂ ಮತದಾನ ದಿನವಾದ ಮೇ ೭ ರಂದು ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಉತ್ಸವಗಳನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ. ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
