ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಶನಿವಾರ ತಡರಾತ್ರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ ಅವರು ದಿಢೀರ್ ಭೇಟಿ ನೀಡಿ ಚೆಕ್‌ಫೋಸ್ಟನ ಅಧಿಕಾರಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ, ಅಳಗಿನಾಳ ಸೇರಿದಂತೆ ವಿವಿಧೆಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಭೇಟಿ ನೀಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಭಾಗದ ವಿವಿಧ ಸ್ಥಳಗಳಲ್ಲಿ ಅಂತರರಾಜ್ಯ ಚೆಕ್‌ಫೋಸ್ಟ್ಗಳನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊAಡAತಿರುವ ಒಳ ಬರುವ ಮತ್ತು ಹೊರ ಹೋಗುವ ವಾಹನಗಳನ್ನು ಕಡ್ಡಾಯವಾಗಿ ತಪಾಸಿಸಬೇಕು. ಪ್ರತಿ ವಾಹನಗಳ ಚಲನ-ವಲನ ಕುರಿತು ಚಲನ-ವಲನ ವಹಿ ಇಟ್ಟು ನಿರ್ವಹಿಸಬೇಕು. ಎಲ್ಲಾ ವಾಹನಗಳ ವಿವರ ದಾಖಲಿಸಬೇಕು. ಪ್ರತಿ ವಾಹನದ ಮೇಲೆ ನಿಗಾ ವಹಿಸಬೇಕು. ಯಾವುದೇ ರೀತಿಯ ಅಕ್ರಮ ವಸ್ತುಗಳ ಸಾಗಾಣಿಕೆ ಕಂಡು ಬಂದಲ್ಲಿ ತಕ್ಷಣ ಜಪ್ತಿ ಮಾಡುವ ಜೊತೆಗೆ ವಶಕ್ಕೆ ಪಡೆದು ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿಗಳು ಪರಸ್ಪರ ಸಹಯೋಗದೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸ್ಟಾö್ಯಟಿಕ್ ಸರ್ವೈಲೈನ್ಸ್ ತಂಡದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಇತರ ಇಲಾಖೆಯ ಸಿಬ್ಬಂದಿ ಇದ್ದರು.
Related Posts
Add A Comment