ದೇಶದ ಸುರಕ್ಷತೆ ಮೋದಿಯಿಂದ ಮಾತ್ರ ಸಾಧ್ಯ :ಯತ್ನಾಳ
ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.4 ರ ಭೂತನಾಳ ತಾಂಡಾದಲ್ಲಿ ಮನೆ ಮನೆಗೆ ತೆರಳಿ ಯುವ ನಾಯಕರಾದ ರಾಮನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಮತಯಾಚಿಸಿದರು.
ನಂತರ ದುರ್ಗಾದೇವಿ ದೇವಸ್ಥಾನ ಹತ್ತಿರ ನಡೆದ ಸಭೆಯಲ್ಲಿ ಭಾಗವಹಿಸಿ, ಈ ಚುನಾವಣೆ ಕೇವಲ ಅಧಿಕಾರಕ್ಕಾಗಿ ಅಲ್ಲ, ಬದಲಾಗಿ ದೇಶದ ಸುರಕ್ಷತೆ, ಸನಾತನ ಧರ್ಮ ಉಳಿಸಲು, ಅಭಿವೃದ್ಧಿಗಾಗಿ ನಡೆಯಲಿದೆ. ವಿಶ್ವ ನಾಯಕರಾದ ಪ್ರಧಾನಿ ಮೋದಿಯವರಿಂದ ಮಾತ್ರ ಜಗದ್ಗುರು ಭಾರತ ನಿರ್ಮಾಣ ಸಾಧ್ಯ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ. ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಲು ನಾವೆಲ್ಲರೂ ಕಂಕಣಬದ್ದರಾಗೋಣ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು ಕೂಡ ಅವಶ್ಯಕ ಎಂದು ಹೇಳಿದರು.
ಮುಖಂಡರಾದ ವಿವೇಕಾನಂದ ಡಬ್ಬಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್.ಸಿ.ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.

