ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಹಿರೇಮಠದಲ್ಲಿ ಮೇ.೦೫ ರಿಂದ ೧೨ರವರೆಗೆ ಶ್ರೀ ಜಗದ್ಗುರು ದಾರುಕಾಚಾರ್ಯ ಜಾತ್ರಾ ಮಹೋತ್ಸವ, ಬಸವ ಮಹಾಪುರಾಣ ಹಾಗೂ ಲಿಂ.ಪೂಜ್ಯ ಶ್ರೀ ಮರುಳಾರಾಧ್ಯ ಶಿವಾಚಾರ್ಯರ ೧೧೦ನೆಯ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಸಂಚಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ ೦೫ರಂದು ಜರುಗಲಿರುವ ಕನ್ನೊಳ್ಳಿಯ ಶ್ರೀ ಸಿದ್ದಲಿಂಗ ಜ್ಞಾನಜ್ಯೋತಿ ವಿದ್ಯಾಪ್ರಸಾರ ಸಂಘದ ಅಡಿಯಲ್ಲಿ ನೂತನವಾಗಿ ಪ್ರಾರಂಭವಾಗುವ ಮಾತೃಶ್ರೀ ಬಸಲಿಂಗಮ್ಮ ಬಾಳಪ್ಪ ಭೂಸನೂರ ಕಲಾ, ವಾಣಿಜ್ಯ ಪಪೂ ಕಾಲೇಜಿನ ಉದ್ಘಾಟನಾ ಸಮಾರಂಭದ ಪಾವನ ಸಾನಿಧ್ಯವನ್ನು ಶ್ರೀಶೈಲ ಪೀಠದ ಶ್ರೀಶ್ರೀಶ್ರೀ ೧೦೦೮ ಜಗದ್ಗುರು ಡಾ.ಚೆನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳ ಅವರು ವಹಿಸಿಲಿದ್ದಾರೆ. ಸಮ್ಮುಖವನ್ನು ಬಂಥನಾಳ ವೃಷಭಲಿಂಗ ಮಹಾಸ್ವಾಮಿಗಳು, ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸುವರು. ಉಪದೇಶಾಮೃತವನ್ನು ಕೊಣ್ಣೂರು ಹೊರಗಿನಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಗುಣದಾಳ ವಿವೇಕಾನಂದ ದೇವರು ನೀಡುವರು. ಅಧ್ಯಕ್ಷತೆಯನ್ನು ಶಾಸಕ ಅಶೋಕ ಮನಗೂಳಿ ವಹಿಸಿಕೊಳ್ಳಲಿದ್ದಾರೆ. ಉದ್ಘಾಟನೆಯನ್ನು ಮಾಜಿ ಶಾಸಕ ರಮೇಶ ಭೂಸನೂರ ನೇರವೇರಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ವಿಪ ಸದಸ್ಯ ಅರುಣ ಶಹಾಪೂರ ಸೇರಿದಂತೆ ಅನೇಕರು ಗಣ್ಯರು ವಹಿಸಿಕೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
