Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಗಟ್ಟೆಯಲ್ಲಿ ಮೊಬೈಲಗೆ ಅವಕಾಶವಿಲ್ಲ :ಚುನಾವಣಾಧಿಕಾರಿ ಭೂಬಾಲನ್
(ರಾಜ್ಯ ) ಜಿಲ್ಲೆ

ಮತಗಟ್ಟೆಯಲ್ಲಿ ಮೊಬೈಲಗೆ ಅವಕಾಶವಿಲ್ಲ :ಚುನಾವಣಾಧಿಕಾರಿ ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಯಾವುದೇ ಮತಗಟ್ಟೆಯಲ್ಲಿ ಕೂಡ ಪಿಆರ್‌ಒ ಹೊರತುಪಡಿಸಿ ಯಾವುದೇ ಅಧಿಕಾರಿಯಾಗಲಿ, ಸಿಬ್ಬಂದಿ ಮತ್ತು ಮತದಾರರಿಗೆ ಮೊಬೈಲ್ ತೆಗೆದುಕೊಂಡು ಒಯ್ಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರವಿವಾರ ಸಂಜೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳೊಂದಿಗೆ ಮತದಾನ ಸಿದ್ದತೆ ಕುರಿತು ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದ ಅವರು, ಮತಗಟ್ಟೆಯಲ್ಲಿ ಪಿಆರ್‌ಒ ಮಾತ್ರ ಮೊಬೈಲ್ ಒಯ್ಯತಕ್ಕದ್ದು ಮತ್ತು ಅದನ್ನು ಕೂಡಾ ಸೈಲೆಂಟ್ ಮೋಡನಲ್ಲಿ ಇರಿಸಬೇಕು ಎಂದರು.
ಮೇ.7 ರಂದು ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಮತದಾನ ಜರುಗಿಸಲು, ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಆಯೋಗ ಸೂಚಿಸಿರುವ ನಿಮಯಗಳನ್ನು ಪಾಲಿಸಿ ಕರ್ತವ್ಯ ಪ್ರಜ್ಞೆ ಮೆರೆದು ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಇವಿಎಂ ಸಾಗಿಸುವ ವಾಹನಗಳಿಗೆ ಈಗಾಗಲೇ ಜಿಪಿಎಸ್ ಅಳವಡಿಸಲಾಗಿದ್ದು, ವಾಹನಗಳು ನಿಗದಿತ ಹಾದಿಯಲ್ಲಿ ಸಂಚರಿಸಬೇಕು. ಹಾಗೂ ಯಾವುದೇ ಕಾರಣಕ್ಕೂ ಎಲ್ಲಿಯೂ ಮಾರ್ಗ ಮಧ್ಯದಲ್ಲಿ ನಿಲ್ಲಿಸಬಾರದು ಎಂದು ಸೂಚಿಸಿದರು.
ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಿಯಮಾನುಸಾರ ಜರುಗಿಸಲು ಮುಂದಿನ 48 ಗಂಟೆಗಳ ಅವಧಿಯಲ್ಲಿ ಅವಶ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಬಹಿರಂಗ ಪ್ರಚಾರ ರವಿವಾರ ಸಂಜೆ ಮುಕ್ತಾಯಗೊಂಡಿರುತ್ತದೆ. ಸೋಮವಾರದ ಪ್ರಚಾರಕ್ಕೆ ಕೇವಲ 5 ಜನರ ಗುಂಪು ಮಾತ್ರ ಮನೆಮನೆ ಪ್ರಚಾರ ಮಾಡಲು ಅವಕಾಶ ಇರುತ್ತದೆ ಎಂದರು.
ಮತಗಟ್ಟೆ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಲ್ಲಲು ನೆರಳು ವ್ಯವಸ್ಥೆ, ಹಿರಿಯ ನಾಗರಿಕರಿಗೆ ಆಯಾಸವಾಗದಂತೆ ಕುಳಿತುಕೊಳ್ಳಲು ಬೆಂಚ್ ಅಥವಾ ಕುರ್ಚಿಯ ವ್ಯವಸ್ಥೆ, ವಿಕಲಚೇತನರಿಗೆ ಅವಶ್ಯವಿದ್ದಲ್ಲಿ ವಿಲ್ ಚೇರ್ ವ್ಯವಸ್ಥೆ, ನೀರು, ಶೌಚಾಲಯ, ವಿದ್ಯುತ್ ಇತ್ಯಾದಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಮತದಾನ ದಿನದಂದು, ರಾಜಕೀಯ ಪಕ್ಷದ ಚಿಹ್ನೆ ಮತ್ತು ಅಭ್ಯರ್ಥಿಯ ಭಾವಚಿತ್ರ, ಸ್ಲೋಗನ್ ಒಳಗೊಂಡಿರುವ ವೊಟರ್ ಸ್ಲೀಪ್‌ಗಳನ್ನು ಮತದಾರರಿಗೆ ವಿತರಿಸುವದನ್ನು ಹಾಗೂ ಬಳಸುವದನ್ನು ನಿಷೇಧಿಸಲಾಗಿದೆ. ಮತ್ತು ಮತಗಟ್ಟೆಯೊಳಗೆ ಪ್ರವೇಶ ಮಾಡುವಾಗ ಮತದಾರರು ಹಾಗೂ ಇತರರು, ರಾಜಕಿಯ ಪಕ್ಷ ಅಥವಾ ಅಭ್ಯರ್ಥಿಯ ಭಾವಚಿತ್ರ, ಚಿಹ್ನೆ ಮತ್ತು ಸ್ಲೋಗನ್ ಹೊಂದಿರುವ ಕ್ಯಾಪ್, ಟವಲ್, ಸ್ಕಾರ್ಪ್, ಟೀ ಶರ್ಟ್ ಸೇರಿದಂತೆ ಇಂತಹ ಬಟ್ಟೆಗಳನ್ನು ಧರಿಸಿ, ಮತಗಟ್ಟೆಂಗೆ ಬರುವುದ ನಿರ್ಭಂದಿಸಲಾಗಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾತನಾಡಿ, ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ವೇಳೆಯಲ್ಲಿ ಕಡ್ಡಾಯವಾಗಿ ಪೊಲೀಸ್ ಅಧಿಕಾರಿಗಳು ಪ್ರಥಮ ಆದ್ಯತೆಯ ಮೇಲೆ ಸೂಕ್ತ ಭದ್ರತೆ ಕೊಟ್ಟು ಯಾವುದೇ ಗೊಂದಲ ಹಾಗೂ ಅವ್ಯವಸ್ಥೆಗೆ ಆಸ್ಪದ ಕೊಡದಂತೆ ಮುನ್ನೆಚ್ಚರಿಕೆಯಾಗಿ ಕಾರ್ಯ ನಿರ್ವಹಿಸಬೇಕು ಬೇಕು ಎಂದು ಹೇಳಿದರು.
ಮತಗಟ್ಟೆಯಲ್ಲಿ ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರಚಾರ ನಿಷೇಧ:
ಯಾವುದೇ ವ್ಯಕ್ತಿ, ಯಾವುದೇ ಮತಗಟ್ಟೆಯಲ್ಲಿ ಮತದಾನ ದಿನದಂದು ಮತದಾನ ಕೇಂದ್ರದ ಒಳಗೆ ಅಥವಾ 200 ಮೀಟರ್ ವ್ಯಾಪ್ತಿಯಲ್ಲಿ ಮತಗಳ ಪ್ರಚಾರ ಅಥವಾ ಯಾವುದೇ ಮತದಾರರ ಮತವನ್ನು ಕೇಳುವುದು ಅಥವಾ ಯಾವುದೇ ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು ಅಥವಾ ಹಾಕದಂತೆ ಮತದಾರರನ್ನು ಮನವೊಲಿಸುವುದು, ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸೂಚನೆ ಅಥವಾ ಚಿಹ್ನೆಯನ್ನು ಪ್ರದರ್ಶಿಸುವುದು ನಿರ್ಭಂದವಿರುತ್ತದೆ ಎಂದರು.
ಸಾರ್ವಜನಿಕರು ಯಾವುದೇ ವದಂತಿಗಳಿಗೆ ಗೊಂದಲಕ್ಕೆ ಒಳಗಾಗದಂತೆ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳು ಮುನ್ನೆಚರಿಕೆಯಿಂದ ಕ್ರಮವಹಿಸಬೇಕು. ಮತಗಟ್ಟೆಯಲ್ಲಿ ದಾಂದಲೆ, ಅಪರಾಧ ಚಟುವಟಿಕೆ ನಡೆಯದಂತೆ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.