Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಕ್ತ-ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಮುಕ್ತ-ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ :ಡಿಸಿ ಟಿ.ಭೂಬಾಲನ್

By Updated:No Comments4 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮೇ.೦೭ರಂದು ಬೆಳಿಗ್ಗೆ ೭ರಿಂದ ಸಂಜೆ ೬ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೧೯,೪೬,೦೯೦ ಮತದಾರರಿದ್ದು, ಜಿಲ್ಲೆಯಾದ್ಯಂತ ಒಟ್ಟು ೨೦೮೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಇದೇ ಮೇ.೭ ರಂದು ನಡೆಯುವ ಮತದಾನ ಹಾಗೂ ಜೂನ್. ೪ ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮತದಾರರ ವಿವರ: ಜಿಲ್ಲೆಯಲ್ಲಿ ೯,೮೭,೯೭೪ ಗಂಡು, ೯,೫೭,೯೦೬ ಹೆಣ್ಣು ಹಾಗೂ ೨೧೦ ಇತರೆ ಮತದಾರರು ಸೇರಿದಂತೆ ಒಟ್ಟು ೧೯,೪೬,೦೯೦ ಮತದಾರರಿದ್ದಾರೆ. ೮೫ ವರ್ಷಕ್ಕಿಂತ ಮೇಲ್ಪಟ್ಟು ಒಟ್ಟು ೨೩೫೭ ಮತದಾರರ ಪೈಕಿ ೨೧೭೦ ಮತದಾರರು ತಮ್ಮ ಮನೆಯಿಂದ ಮತ ಚಲಾಯಿಸಿದ್ದು, ಶೇ.೯೨.೦೬ ರಷ್ಟು ಮತದಾನವಾಗಿದೆ. ಅದರಂತೆ ಶೇ.೪೦ಕ್ಕಿಂತ ಹೆಚ್ಚಿನ ದಿವ್ಯಾಂಗವಿರುವ (ಪಿಡಬ್ಲೂಡಿ) ಒಟ್ಟು ೮೮೬ ಮತದಾರರ ಪೈಕಿ ೮೫೪ ಮತದಾರರು ಮತ ಚಲಾಯಿಸುವ ಮೂಲಕ ಶೇ.೯೬.೩೮ ರಷ್ಟು ಮತದಾನವಾಗಿದೆ.
ಮತಗಟ್ಟೆಗಳ ವಿವರ: ವಿಜಯಪುರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಒಟ್ಟು ೨೦೮೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಪ್ರತಿ ವಿಧಾನಸಭಾವಾರು ೦೫ ಸಖಿ ಮತಗಟ್ಟೆ, ೦೮ ದಿವ್ಯಾಂಗ ಮತಗಟ್ಟೆ, ೦೮ ಯುವ ಮತಗಟ್ಟೆ, ೦೮ ಧ್ಯೇಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಾದ್ಯಂತ ೧೭೧ ಸೂಕ್ಷ್ಮ ಹಾಗೂ ೪೧ ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಮೈಕ್ರೋ ಆಬ್ಜರ್ವರ್ ನೇಮಿಸಿದ್ದು, ವೆಬ್‌ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುತ್ತಿದೆ. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ರ‍್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಪೀಠೋಪಕರಣ, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿ, ಆಸನ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ವಿದ್ಯುನ್ಮಾನ ಮತಯಂತ್ರಗಳ ವಿವರ: ಚುನಾವಣೆಗಾಗಿ ೨೬೧೭ ಬಿ.ಯು, ೨೬೧೬ ಸಿ.ಯು, ೨೭೭೩ ವಿವಿಪ್ಯಾಟ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ನಂತರ ಮತ ಯಂತ್ರಗಳನ್ನು ಭದ್ರತೆಯಲ್ಲಿ ಇರಿಸಲು ವಿಧಾನಸಭಾವಾರು ಮತ್ರಯಂತ್ರಗಳನ್ನು ಇರಿಸಲು ಸೈನಿಕಶಾಲೆಯಲ್ಲಿ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದ್ದು, ವಿಧಾನಸಭಾವಾರು ವಿವರದಂತೆ ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದ ಮತಯಂತ್ರಗಳನ್ನು ಸೈನಿಕ ಶಾಲೆಯ ಒಡೆಯರ ಸದನದಲ್ಲಿ, ಬಸವನಬಾಗೇವಾಡಿ ಹಾಗೂ ಬಬಲೇಶ್ವರ ಮತಕ್ಷೇತ್ರದ ಮತಯಂತ್ರಗಳನ್ನು ಆದಿಲ್‌ಶಾಹಿ ಸದನದಲ್ಲಿ, ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರದ ಮತಯಂತ್ರಗಳನ್ನು ಹೊಯ್ಸಳ ಸದನದಲ್ಲಿ, ಇಂಡಿ ಹಾಗೂ ಸಿಂದಗಿ ಮತಕ್ಷೇತ್ರದ ಮತಯಂತ್ರಗಳನ್ನು ವಿಜಯಪುರ ನಗರ ಸದನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಚುನಾವಣಾ ಸಿಬ್ಬಂದಿಗಳ ವಿವರ : ಚುನಾವಣಾ ಕರ್ತವ್ಯಕ್ಕೆ ೨೫೨೭ ಪಿಆರ್‌ಓ, ೨೫೨೭ ಎಪಿಆರ್‌ಓ, ೫೦೫೪ ಪಿಓ, ೧೮೪ ಮೈಕ್ರೋ ಆಬ್ಜರ್ವರ್‌ಗಳನ್ನು ನಿಯೋಜಿಸಲಾಗಿದೆ. ನಿಯೋಜಿತ ಸಿಬ್ಬಂದಿಗಳಿಗೆ ಪ್ರತಿ ಮತಗಟ್ಟೆಗಳಿಗೆ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರನ್ನು ಅವಶ್ಯಕ ಔಷಧೋಪಚಾರದೊಂದಿಗೆ ನಿಯೋಜಿಸಲಾಗಿದೆ. ಚುನಾವಣೆಗೆ ನಿಯೋಜಿಸಿ ಸಿಬ್ಬಂದಿಗಳಿಗೆ ಆಯಾ ಮತಗಟ್ಟೆಗಳಲ್ಲಿ ಹಾಗೂ ಆಯಾ ಮಸ್ಟರಿಂಗ್ ಡಿ ಮಸ್ಟರಿಂಗ್ ಕೇಂದ್ರಗಳಲ್ಲಿ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಸಿಬ್ಬಂದಿಗಳಿಗೆ ೨೪೧ ಬಸ್ಸು, ೧೨೪ ಕ್ರೂಸರ್ ಸೇರಿದಂತೆ ಒಟ್ಟು ೩೬೫ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಮತಗಟ್ಟೆ ಸಿಬ್ಬಂದಿಗಳ ಮಕ್ಕಳ ಪಾಲನೆ-ಪೋಷಣೆಗಾಗಿ ದಿ.೦೬-೦೫-೨೦೨೪ ಮತ್ತು ೦೭-೦೫-೨೦೨೪ ರಂದು ಮಕ್ಕಳನ್ನು ನೋಡಿಕೊಳ್ಳಲು ಮಸ್ಟರಿಂಗ್ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೇಲ್ವಿಚಾರಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಮತದಾರ ಸೌಲಭ್ಯ ಕೇಂದ್ರ- ಅಂಚೆ ಮತದಾನ ವಿವರ: ಜಿಲ್ಲೆಯಲ್ಲಿ ಅಗತ್ಯ ಸೇವೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಮತದಾರರಿರುವ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಸ್ಥಾಪಿಸಲಾದ ಮತದಾರರ ಸೌಲಭ್ಯ ಕೇಂದ್ರಗಳಲ್ಲಿ ಹಾಗೂ ಅಂಚೆ ಮತದಾನ ಕೇಂದ್ರಗಳ (ಎಫ್‌ಸಿ &ಪಿವಿಸಿ) ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸದರಿ ಸೌಲಭ್ಯ ಕೇಂದ್ರಗಳಲ್ಲಿ ಅಗತ್ಯ ಸೇವೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ೧೯೬೯ ಮತದಾರರ ಪೈಕಿ ೬೫೪ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿ ಈ ಜಿಲ್ಲೆಯ ಮತದಾರರು ಹಾಗೂ ಈ ಜಿಲ್ಲೆಯ ಮತದಾರರು ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರ ಮತದಾರರು ಒಟ್ಟು ೧೩೮೨ರ ಪೈಕಿ ೭೪೩ ಮತದಾರರು ಮತ ಚಲಾಯಿಸಿದ್ದಾರೆ.
ಮಾದರಿ ನೀತಿ ಸಂಹಿತೆ: ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಣೆ ಪ್ರಕರಣಗಳ ಮೇಲೆ ನಿಗಾ ಇಡಲು ರಚಿಸಲಾದ ಪೊಲೀಸ್-ಕ್ಷೀಪ್ರ ಪಡೆಗಳು (ಎಫ್‌ಎಸ್‌ಟಿ) ಸ್ಥಿರ ಕಣ್ಗಾವಲು ತಂಡಗಳು (ಎಸ್‌ಎಸ್‌ಟಿ), ಆದಾಯ ತೆರಿಗೆ ಸೇರಿದಂತೆ ಒಟ್ಟು ೩೭೮.೫೧ ಲಕ್ಷ ರೂ. ನಗದು, ೨೧.೧೦ಲಕ್ಷ ರೂ.ಮೌಲ್ಯದ ೫೨೧೦.೭೯೮ ಲೀ. ಮದ್ಯ, ೪.೦೫ ಲಕ್ಷ ರೂ. ಮೌಲ್ಯದ ೪೪.೮೩೨ ಕಿ.ಗ್ರಾಂ. ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಕುಂದು ಕೊರತೆ ಪರಿಹಾರ: ಮತದಾರರ ಸಹಾಯವಾಣಿಯಿಂದ ಸ್ವೀಕೃತವಾದ ಒಟ್ಟು ೨೯೦ ಕರೆಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ ಎನ್.ಜಿ.ಆರ್.ಎಸ್. ಪೋರ್ಟಲ್‌ನಲ್ಲಿ ೨೮೧ ದೂರುಗಳನ್ನು ದಾಖಲಿಸಲಾಗಿದ್ದು, ಎಲ್ಲ ೨೮೧ ದೂರುಗಳನ್ನು ವಿಲೇವಾರಿ ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಯ ೮ ದೂರುಗಳಿಗೆ ಸಂಬಂಧಿಸಿದಂತೆ ೩ ದೂರುಗಳು ವಿಚಾರಣಾ ಹಂತದಲ್ಲಿದ್ದು, ಅಧಿಕಾರಿ-ನೌಕರರ ವಿರುದ್ದ ಸ್ವೀಕೃತವಾದ ೩೮ ದೂರುಗಳ ಪೈಕಿ ೩೬ ದೂರುಗಳನ್ನು ನಿಖಾಲಿ ಮಾಡಲಾಗಿದೆ. ಬಾಕಿ ೨ ದೂರುಗಳು ವಿಚಾರಣೆಯಲ್ಲಿವೆ. ಇತರೆ ಚುನಾವಣೆಗೆ ಸಂಬಂಧಿಸಿದ ೭ ದೂರುಗಳ ಪೈಕಿ ೪ ದೂರುಗಳು ನಿಖಾಲಿಯಾಗಿದ್ದು, ೩ ದೂರುಗಳು ವಿಚಾರಣೆ ಹಂತದಲ್ಲಿವೆ. ಸುವಿಧಾ ಅಡಿಯಲ್ಲಿ ೨೫೦ ಅರ್ಜಿಗಳ ಪೈಕಿ ೨೧೫ ಅರ್ಜಿ ಅಂಗೀಕರಿಸಲಾಗಿದೆ. ೧೯ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ೩ ಅರ್ಜಿಗಳು ಬಾಕಿ ಇವೆ, ೧೩ ಅರ್ಜಿಗಳನ್ನು ರದ್ದುಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ : ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಎಲ್ಲ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ೦೨ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ೮ ಡಿಎಸ್‌ಪಿ, ೨೬ ಸಿಪಿಐ, ೯೫ ಪಿಎಸ್‌ಐ, ೧೨೧ ಎಎಸ್‌ಐ, ೭೦೪ ಹೆಚ್.ಸಿ., ೧೧೮೭ ಪಿಸಿ, ೯೪೫ ಎಚ್‌ಜಿ, ೧೧ ಎಫ್‌ಜಿ ಸೇರಿದಂತೆ ೩೦೯೯ ಜನರು ಸೇರಿದಂತೆ ೫೫ ಸಿಎಪಿಎಫ್ ಹಾಗೂ ೫ ಐಆರ್‌ಬಿ-ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಲೈಸನ್ಸ್ ಹೊಂದಿರುವ ಒಟ್ಟು ೨೩೬೩ ಆಯುಧಗಳ ಪೈಕಿ ೨೨೭೪ ಜಮಾ ಮಾಡಲಾಗಿದ್ದು, ೫೪ ಆಯುಧಗಳನ್ನು ವಿನಾಯಿತಿ ನೀಡಲಾಗಿದೆ.
ನಿಷೇಧಾಜ್ಞೆ: ಶೂನ್ಯ ಅವಧಿ (ಕೊನೆಯ ೪೮ ಗಂಟೆಗಳು)ಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ನಿಷೇಧಿಸಲಾಗಿದೆ. ೫ಕ್ಕಂತ ಹೆಚ್ಚಿನ ಜನರು ತಿರುಗಾಡುವುದನ್ನು ನಿಷೇಧಿಸಿದೆ. ಮದ್ಯಪಾನ ಮಾರಾಟ ನಿಷೇಧಿಸಿದೆ. ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು ಕ್ಷೇತ್ರವನ್ನು ತೊರೆಯುವಂತೆ ತಿಳಿಸಿದೆ.
ಪ್ರಜಾಸತ್ತಾತ್ಮಕ ವಿಧಾನದ ಮೂಲಕ ಸುಭದ್ರವಾದ ಸರ್ಕಾರವನ್ನು ರಚಿಸುವ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಮತವು ಅಮೂಲ್ಯವಾಗಿರುವುದರಿಂದ ಜಿಲ್ಲೆಯ ಅರ್ಹ ಎಲ್ಲ ಮತದಾರರು ಮತದಾನದ ಹಬ್ಬದಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸುಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.