ಕೊಲ್ಹಾರ: ತಾಲೂಕ ಸ್ವೀಪ್ ಸಮಿತಿ, ತಾಲೂಕ ಪಂಚಾಯತ್ ಹಾಗೂ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸುಭದ್ರ ದೇಶ ನಿರ್ಮಾಣಕ್ಕೆ ಎಲ್ಲ ನಾಗರಿಕರು ಕಡ್ಡಾಯವಾಗಿ ಮಂಗಳವಾರ ನಡೆಯುವ ಮತದಾನದಲ್ಲಿ ತಪ್ಪದೇ ಮತ ಚಲಾಯಿಸಿ ಲೋಕಸಭೆ ಚುನಾವಣೆಯನ್ನು ಯಶಸ್ವಿಗೊಳಿಸಿಬೇಕೆಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಹುಕ್ಕೇರಿರವರು ಮನವಿ ಮಾಡಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಲೋಕಸಭಾ ಚುನಾವಣೆ ೨೦೨೪ ರ ಹಿನ್ನಲೆಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಯಾಣಿಕರೊಂದಿಗೆ ಮಾಹಿತಿ ವಿನಿಮಯ ನೀಡಿ, ಚುನಾವಣಾ ಆಯೋಗ ಗುರುತು ಮಾಡಿರುವ ದಾಖಲೆಗಳೊಂದಿಗೆ ತಪ್ಪದೇ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು ಹಿರಿಯಯರು, ವಿಶೇಷ ಚೇತನರಿಗೆ ಪ್ರಥಮ ಆದ್ಯತೆ ನೀಡಿ, ನಾಗರಿಕರು ಶಾಂತಿಯುತವಾಗಿ ಸಹಕರಿಸಿ ತಾಲೂಕಿನಲ್ಲಿ ೧೦೦ ರಷ್ಟು ಮತದಾನ ಆಗುವಂತೆ ತಾವೆಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಮಯದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಹುಕ್ಕೇರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿಕಿರ್ತಿ ರವರು ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ ಕುರಿತ ಪೋಸ್ಟರ್ಗಳನ್ನು ಗೋಡೆಗಳ ಮೇಲೆ ಅಂಟಿಸಿವುದರ ಜೊತೆಗೆ ಜಾಗೃತಿ ಕುರಿತು ಮಾಹಿತಿಯುಳ್ಳ ಕರ ಪತ್ರಗಳನ್ನು ಹಂಚುವ ಮೂಲಕ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

