ವಿಜಯಪುರ: ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿಗೆ ವಿಧಿಸಿದ್ದ ನಿಷೇಧವನ್ನು ಶನಿವಾರ ಹಿಂಪಡೆದಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಈರುಳ್ಳಿ ಬೆಳೆಗಾರರ ಪಾಲಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ವರದಾನವಾಗಿದ್ದು, ರೈತರ ಮೊಗದಲ್ಲಿ ಹರ್ಷವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹಾಗೂ ಬಿಜೆಪಿ ಮುಖಂಡ ಟಿ.ಟಿ.ಹಗೇದಾಳ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈರುಳ್ಳಿ ರಫ್ತಿಗೆ ಹೇರಿದ್ದ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆಯಲಾಗಿದೆ. ಈರುಳ್ಳಿ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಬಹುದು. ಆದರೆ, ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಪಕ್ಕದ ಮಹಾರಾಷ್ಟ್ರದ ಬಿಟ್ಟರೆ ಕರ್ನಾಟಕದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಭಾಗದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಗಾರರಿದ್ದಾರೆ. ಎಲ್ಲರಿಗೂ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬಹಳ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕೇಂದ್ರದಿಂದ ಈರುಳ್ಳಿ ರಫ್ತು ನಿಷೇಧ ವಾಪಸ್ :ಬೆಳ್ಳುಬ್ಬಿ ಹರ್ಷ
Related Posts
Add A Comment

