ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ಪಟ್ಟಿಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ೭೫ನೇ ಯಾತ್ರಾ ಮಹೋತ್ಸವ, ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ ೨೩ನೇ ಸಂಸ್ಮರಣೋತ್ಸವ ಹಾಗೂ ಗುರು ಮಹಾಂತೇಶ್ವರ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರು ಆದ ಸಮಾಜ ಸೇವಕ ಎಸ್.ಎಸ್.ಆಲೂರ ದಂಪತಿಗಳಿಗೆ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಏ.೮ರ ಬುಧವಾರದಂದು ಮನಗೂಳಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಇವರ ಸೇವೆಯನ್ನು ಪರಿಗಣಿಸಿ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡೋಣೂರು-ಕೊಟ್ಟುರು ಮಠದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕೆರೂರ-ಕೊಣ್ಣೂರ ಮಠದ ಡಾ.ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಅಮರೇಶ್ವರಮಠ ಗುಳೇದಗುಡ್ಡದ, ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಷ.ಬ್ರ.ಡಾ.ನೀಲಕಂಠ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿಯ ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಇಂಗಳೇಶ್ವರ-ವಡವಡಗಿಯ ಬೃಂಗೀಶ್ವರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಸೋಮನಗೌಡ(ಅಪ್ಪುಗೌಡ) ಪಾಟೀಲ, ಚಂದ್ರಶೇಖರ ಎಸ್.ಪಾಟೀಲ, ಎಸ್.ಜಿ.ಹಾವಣ್ಣವರ, ಎಸ್.ಆಯ್.ರೇವೂರಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

