ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬಸವ ಜಯಂತಿಯಂಗವಾಗಿ ಮೇ.೯,೧೦ ರಂದು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಮೇ. ೯ ರಂದು ಬೆಳಗ್ಗೆ ೭ ಗಂಟೆಯಿಂದ ದೇವಸ್ಥಾನದಲ್ಲಿ ಶಿವಭಜನೆ ಆರಂಭವಾಗಲಿದೆ. ಸಂಜೆ ೬ ಗಂಟೆಗೆ ದೇವಸ್ಥಾನದ ಆವರಣದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತವೆ. ರಾತ್ರಿ ೯.೩೦ ಗಂಟೆಗೆ ಅಂಕಲಗಿಯ ಜಯಶ್ರೀ ಭಜನಾ ಸಂಘ ಹಾಗೂ ಉಮದಿಯ ಬಾಹುಸಾಹೇಬ ಮಹಾರಾಜ ಭಜನಾ ಸಂಘದಿಂದ ಭಜನಾ ಪದಗಳು ನಡೆಯಲಿವೆ.
ಮೇ. ೧೦ ರಂದು ಬೆಳಗ್ಗೆ ೭.೩೦ ಗಂಟೆಗೆ ದೇವಸ್ಥಾನದ ಆವರಣದಲ್ಲಿ ಷಟ್ಸ್ಥಲ ಧ್ವಜಾರೋಹಣ ನೆರವೇರಲಿದೆ. ಬೆಳಗ್ಗೆ ೧೦.೩೦ ಗಂಟೆಗೆ ಬಸವ ಜನ್ಮಸ್ಮಾರಕದಲ್ಲಿ ವಿರಕ್ತಮಠದ ಮುರುಘೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಸಾಂಸ್ಕ್ರತಿಕ ನಾಯಕ ವಿಶ್ವಗುರು ಬಸವೇಶ್ವರರ ತೊಟ್ಟಿಲು ಹಾಗೂ ನಾಮಕರಣ ಸಮಾರಂಭ ನಡೆಯಲಿದೆ. ಮಧ್ಯಾನ್ಹ ೧೨.೩೦ ಗಂಟೆಗೆ ಬಸವಜನ್ಮ ಸ್ಮಾರಕದ ಮುಂಭಾಗ, ಬಸವೇಶ್ವರ ದೇವಸ್ಥಾನದ ದಾಸೋಹ ಭವನದಲ್ಲಿ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಸಂಜೆ ೫ ಗಂಟೆಗೆ ದೇವಸ್ಥಾನದ ಆವರಣದಲ್ಲಿ ವಚನ ಚಿಂತನ ಗೋಷ್ಠಿ ನಡೆಯಲಿದೆ. ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಚಿಂತಕ,ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿರೇಶ ವಾಲೀ, ಸಾಕ್ಷಿ ಹಿರೇಮಠ ಅವರಿಂದ ವಚನ ಸಂಗೀತ ಹಾಗೂ ಬೆಂಗಳೂರಿನ ನವ್ಯ ನಾಟ್ಯ ಸಂಗಮ ಅವರಿಂದ ಭಕ್ತಿ ಭಂಡಾರಿ ಬಸವಣ್ಣನವರ ನೃತ್ಯರೂಪಕ ಜರುಗಲಿದೆ. ರಾತ್ರಿ ೯.೩೦ ಗಂಟೆಗೆ ಅಲಂಕೃತ ಬಸವೇಶ್ವರರ ಪಲ್ಲಕ್ಕಿ ಹಾಗೂ ಬಸವೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ಮಂಗಲ ವಾದ್ಯವೈಭವದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಲಿದೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತರಾದ ನಿಂಗಪ್ಪ ಬಿರಾದಾರ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

