ದೇವರಹಿಪ್ಪರಗಿ: ಪಟ್ಟಣದ ಬಸವ ಶರಣಸಂಗಮ ಸೇವಾ ಸಮಿತಿಯ ಅಡಿಯಲ್ಲಿ ದಿ:೧೦ ಶುಕ್ರವಾರದಂದು ಬಸವ ಜಯಂತ್ಯುತ್ಸವ ಹಾಗೂ ಶ್ರೀಬಸವಶ್ರೀ ಪ್ರಶಸ್ತಿ ವಿತರಣಾ ಸಮಾರಂಭ ಜರುಗಲಿದೆ.
ಪಟ್ಟಣದ ಬಸವೇಶ್ವರ ವೃತದಲ್ಲಿ ಬೆಳಿಗ್ಗೆ ಭಾವಚಿತ್ರಕ್ಕೆ ಪೂಜೆ ಜರುಗಲಿದೆ. ನಂತರ ಸಾಯಂಕಾಲ ಶ್ರೀಸಿದ್ಧೇಶ್ವರ ಸ್ವಾಮೀಜಿ ವಸತಿ ಶಾಲೆಯ ಆವರಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಮಹನೀಯರಿಗೆ ‘ಶ್ರೀಬಸವಶ್ರೀ’ ಪ್ರಶಸ್ತಿ ಹಾಗೂ ಇತರ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಅಧ್ಯಕ್ಷ ಸಂಗಪ್ಪ ತಡವಲ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
