ಮುದ್ದೇಬಿಹಾಳ: ತಾಲೂಕಿನ ತಾರನಾಳ ಗ್ರಾಮದ ಅಂಗನವಾಡಿಯಲ್ಲಿ ವಿತರಿಸಲಾದ ಪೌಷ್ಟಿಕ ಅಹಾರ ಪದಾರ್ಥಗಳು (ರವಾ, ಬೆಲ್ಲ, ಉಪ್ಪಿಟ್ಟು÷ಚಟ್ನಿ) ಅತ್ಯಂತ ಕಳಪೆ ಮಟ್ಟದ್ದಾಗಿವೆ. ಅಲ್ಲದೇ ಮೊಟ್ಟೆ ಸೇರಿದಂತೆ ಇನ್ನುಳಿದ ಅಹಾರ ಪದಾರ್ಥಗಳನ್ನು ಮಕ್ಕಳಿಗೆ, ಗರ್ಭಿಣಿ ಬಾಣಂತಿಯರಿಗೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.
ಕಳಪೆ ಮಟ್ಟದ್ದಾಗಿವೆ ಎಂದು ದೂರಿದ ಅಹಾರ ಪದಾರ್ಥಗಳ ಫೋಟೋ ಕ್ಲಿಕ್ಕಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಗ್ರಾಮಸ್ಥರು, ಪೌಷ್ಠಿಕ ಅಹಾರ ಪದಾರ್ಥಗಳನ್ನು ಸೇವಿಸಿ ಗರ್ಭಿಣಿಯರು ಆರೋಗ್ಯಯುತ ಮಗುವಿಗೆ ಜನ್ಮ ನೀಡಲಿ, ಮಕ್ಕಳು ದೈಹಿಕವಾಗಿ ಸದೃಢರಾಗಲಿ ಎಂಬುದು ಈ ಯೋಜನೆಯ ಉದ್ದೇಶ. ಆದರೆ ಈ ಯೋಜನೆ ಸದುಪಯೋಗವಾಗುತ್ತಿಲ್ಲ. ಕಳಪೆ ಗುಣಮಟ್ಟದ ಅಹಾರಪದಾರ್ಥಗಳನ್ನು ವಿತರಣೆ ಮಾಡುತ್ತಿದ್ದಾರೆ. ಅಲ್ಲದೇ ಇನ್ನುಳಿದ ಅಹಾರ ಪದಾರ್ಥಗಳನ್ನು ನೀಡುತ್ತಿಲ್ಲ. ಮೊಟ್ಟೆಯನ್ನಂತೂ ಕಂಡೇ ಇಲ್ಲ. ಅಪೌಷ್ಠಿಕ ಅಹಾರ ಸೇವಿಸಿದ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರಾದರೆ ಆದರ ಹೊಣೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೇ ಹೊರಬೇಕಾಗುತ್ತದೆ. ಈ ಕೂಡಲೇ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

