ಚಡಚಣ: ಸಮೀಪದ ಝಳಕಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಜಯಪುರದಿಂದ ಸೋಲಾಪುರಕ್ಕೆ ತೆರಳುತ್ತಿರುವ ಲಾರಿಯಲ್ಲಿ ದಾಖಲೆ ಇಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ ರೂ.54.49 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಡಚಣ ಸಿಪಿಐ ಸಾಹೇಬಗೌಡ ಪಾಟೀಲ ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಝಳಕಿ ಪಿಎಸ್‌ಐ ಸಿದ್ದಪ್ಪ ಯಡಳ್ಳಿ ಹಾಗೂ ಸಿಬ್ಬಂದಿಯೊಂದಿಗೆ ವಿಜಯಪುರದಿಂದ ಸೋಲಾಪುರದ ಕಡೆ ಸಾಗುತ್ತಿದ್ದ ಲಾರಿಯನ್ನು ತಡೆದು ವಿಚಾರಣೆ ನಡೆಸಿದಾಗ ದಾಖಲೆ ಇಲ್ಲದ ಲಾರಿಯಲ್ಲಿದ್ದ ರೂ.54.49 ಲಕ್ಷ ನಗದು ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಸಿಪಿಐ ಸಾಹೇಬಗೌಡ ಪಾಟೀಲ ತಿಳಿಸಿದ್ದಾರೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Posts
Add A Comment