ಕಲಕೇರಿ: ಗ್ರಾಮದ ಭೀರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಭೀರಲಿಂಗೇಶ್ವರ ದೇವಸ್ಥಾನದಲ್ಲಿ ಮೇ.೧೦ ರಂದು ಶುಕ್ರವಾರ ವಿವಿದ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೋಳ್ಳಲಾಗಿದೆ.
ಶುಕ್ರವಾರ ಬೆಳಿಗ್ಗೆ ೯ ಘಂಟೆಗೆ ಪಟ್ಟಾಧಿಕಾರ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ ೧೨ ಘಂಟೆಗೆ ವಾಲಗದ ಕಾರ್ಯಕ್ರಮ ನಡೆಯಲಿದೆ. ಸಂಜೆ ೫ ಘಂಟೆಗೆ ಜಾತ್ರಾಮಹೋತ್ಸವದ ಪ್ರಯುಕ್ತವಾಗಿ ಧರ್ಮಸಭೆ ಕಾರ್ಯಕ್ರಮ ನಡೆಯಲಿದ್ದು, ಧರ್ಮಸಭೆಯ ದಿವ್ಯಸಾನಿಧ್ಯವನ್ನು ಸರೂರ ಗುರುಪೀಠದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮಿಗಳು, ಸಾನಿಧ್ಯವನ್ನು ಹುಲಜಂತಿಯ ಮಾಳಿಂಗರಾಯ ದೇವರು, ಕಲಕೇರಿಯ ಗದ್ದಗಿಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರು, ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು, ಚಟ್ಟರಕಿಯ ಕೆಂಚಪ್ಪಮುತ್ಯಾ ಪೂಜಾರಿ, ಸರೂರ ಮೂಲ ಗುರುಪೀಠದ ಸನಯ್ಯಮುತ್ಯಾ ಹಾಲಮತ ಇವರು ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ವಹಿಸಲಿದ್ದು, ಉದ್ಘಾಟಕರಾಗಿ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ ಭಾಗಿಯಾಗುವರು, ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಜ್ಯೋತಿಯನ್ನು ಬೆಳಗಿಸುವರು, ಡಾ. ವೀರೇಶ ತಳ್ಳೊಳ್ಳಿ ಪುಷ್ಪಾರ್ಚನೆ ಮಾಡುವರು. ಎಂ.ಜಿ.ಎಂ.ಕೆ ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ ವಿಶೇಷ ಉಪನ್ಯಾಸ ನೀಡಲಿದ್ದು, ಇದೇ ವೇಳೆ ವಿವಿದ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

