ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಶಿಷ್ಟಾಚಾರದಂತೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಶೀಲ್ದಾರರಾದ ಶ್ರೀಮತಿ ಕವಿತಾ ಅವರು ಬಸವಣ್ಣನವರ ಹಾಗೂ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.
ಇದಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೊನಾವಣೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸಮಾಜದ ಮುಖಂಡರುಗಳಾದ ಶರಣು ಸಬರದ, ಭೀಮರಾಯ ಜಿಗಜಿನ್ನಿ, ಹಣಮಂತ ಮಾಚಪ್ಪನವರ, ಸುರೇಶ ದೇಸಾಯಿ, ಕೆ.ಕೆ.ಬನ್ನೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಜಗಜ್ಯೋತಿ ಬಸವೇಶ್ವರ-ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
Related Posts
Add A Comment

