ವಿಜಯಪುರ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಡಚಣ ತಾಲೂಕಿನ ನಿವರಗಿ ಗ್ರಾಮದ ಶ್ರೀ ಸಂಗಮೇಶ್ವರ ಪ್ರೌಢ ಶಾಲೆ ವಿದ್ಯಾರ್ಥಿಗಳು ಶೇ.೭೯.೧೦% ಫಲಿತಾಂಶವನ್ನು ದಾಖಲಿಸಿದ್ದಾರೆ. ಪರೀಕ್ಷೆಗೆ ಕುಳಿತ ೬೭ ವಿದ್ಯಾರ್ಥಿಗಳ ಪೈಕಿ ೫೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರಜ್ವಲ ನರೂಣಿ ಶೇ.೯೫.೮೪% ಪ್ರಥಮ, ನಿಖಿತಾ ಹಳದಕಿ ಶೇ.೯೪.೦೮% ದ್ವಿತೀಯ, ಚೇತನ ಕರ್ಜಗಿ ಶೇ.೯೦.೭೨% ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ ರಕ್ಷಿತಾ ಬಿರಾದಾರ ಗಣಿತ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ, ನಿಖಿತಾ ಹಳದಕಿ ಮತ್ತು ಚೇತನ ಕರ್ಜಗಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಪಾಟೀಲ, ಮುಖ್ಯ ಗುರು ರವಿಕುಮಾರ ನಾಯಕ ಸಂಸ್ಥೆಯ ಸರ್ವ ಸದಸ್ಯರುಗಳು, ಶಾಲೆಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

