Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ :ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್.ಎಸ್.ಎಲ್.ಸಿ.ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜಯಪುರ: ಸತತ ಪರಿಶ್ರಮ ಹಾಗೂ ಆತ್ಮಸ್ಥೆöÊರ್ಯದಿಂದ ಬದುಕಿನಲ್ಲಿ ಸಾಧನೆಗೈಯ್ಯಲು ಸಾಧ್ಯವಾಗುತ್ತದೆ. ಬಡತನ ಮತ್ತು ಬದುಕಿನ ಕಷ್ಟ ಕಾರ್ಪಣ್ಯಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸತತ ಓದಿನಿಂದ ಏನನ್ನಾದರೂ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಉತ್ತಮ ಸಾಧನೆಗೈದ ನೀವು ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದೀರಿ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ೨೦೨೪ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಸಾಧನೆಗೈದ ಜಿಲ್ಲೆಯ ವಿವಿಧ ಮಾಧ್ಯಮಗಳಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಿದರು.
ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಗರಿಷ್ಟ ಪ್ರಮಾಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಉಪಕ್ರಮಗಳನ್ನು ಅಳವಡಿಸಿಕೊಂಡಿರುವ ಪ್ರಯುಕ್ತ ಪ್ರತಿಯೊಂದು ಕ್ಷೇತ್ರದಲ್ಲಿಯೂ ದಕ್ಷತೆ ಮತ್ತು ನಿಖರತೆಯ ಪ್ರಮಾಣ ಹೆಚ್ಚಾಗಿರುತ್ತದೆ. ಆರೋಗ್ಯಕರ ಸಾಮಾಜಿಕ ವ್ಯವಸ್ಥೆಯನ್ನು ಹಾಗೂ ಸುಸ್ಥಿರ ಸಾರ್ವಜನಿಕ ವ್ಯವಸ್ಥೆಯನ್ನು ಬಲಗೊಳಿಸಲು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಾತ್ರ ಮಾನವಸಂಪನ್ಮೂಲವನ್ನು ನಿರ್ಧರಿಸುವ ಕಾರಣದಿಂದಾಗಿ ಇಂದಿನ ವಿದ್ಯಾರ್ಥಿಗಳು ನಿರಂತರ ಓದು, ಕರಾರುವಾಕ್ ಅಧ್ಯಯನ ಇತ್ಯಾದಿ ಕೌಶಲಗಳನ್ನು ಕಾಲಕ್ಕೆ ತಕ್ಕಂತೆ ಬೆಳೆಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಶಾಲಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಹಲವಾರು ಪರಿಣಾಮಕಾರಿ ಯೋಜನೆಗಳ ಫಲಶ್ರುತಿಯಾಗಿ ಇಂದು ಜಿಲ್ಲೆಯ ಹಲವಾರು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಜಿಲ್ಲೆಗೆ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ವಿಶೇಷ ಗೌರವ ತಂದುಕೊಟ್ಟಿರುವುದು ಅತ್ಯಂತ ಹೆಮ್ಮೆಯ ಮತ್ತು ಸಂತೋಷದ ಸಂಗತಿಯಾಗಿದೆ.
ವಿದ್ಯಾರ್ಥಿಗಳ ಸತತ ಪರಿಶ್ರಮ, ಶಿಕ್ಷಕರ ಕಾರ್ಯತತ್ಪರತೆ ಮತ್ತು ಇಲಾಖಾ ಅಧಿಕಾರಿಗಳ ಸಮಯೋಚಿತ ಮಾರ್ಗದರ್ಶನ ಮತ್ತು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವ್ಯವಸ್ಥೆಯ ನೈತಿಕ ಬೆಂಬಲ ಮತ್ತು ಪ್ರೋತ್ಸಾಹದಿಂದಾಗಿ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಸಾಧ್ಯವಾಗಿದ್ದು, ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದು, ಹೆಮ್ಮೆಯ ವಿಷಯ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಈ ಸಾಧನೆಗಾಗಿ ಅಭಿನಂದನಾರ್ಹವಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೂಡ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಇನ್ನಷ್ಟು ಉತ್ತಮ ಸಾಧನೆಗೆ ಪ್ರೊತ್ಸಾಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಸೊನ್ನದ, ಶಿಕ್ಷಣಾಧಿಕಾರಿ ಡಾ.ಅಶೋಕ ಮ. ಲಿಮಕರ, ಕ್ಷೇತ್ರ-ಶಿಕ್ಷಣಾಧಿಕಾರಿಗಳಾದ ಬಸವರಾಜ.ತಳವಾರ.. ಪ್ರಮೋದಿನಿ ಬಳೋಳಮಟ್ಟಿ, ಬಸವರಾಜ.ಎಸ್.ಸಾವಳಗಿ ಮತ್ತು ಎಲ್ಲ ಹನ್ನೊಂದೂ ವಿದ್ಯಾರ್ಥಿಗಳ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಪಾಲಕರು, ಪೋಷಕರು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.