ಸಿಂದಗಿ: ಬಸವಣ್ಣನವರು ೧೨ನೆಯ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರತಿಪಾದಿಸಿ ಲಿಂಗಬೇಧ, ವರ್ಗಬೇಧಗಳನ್ನು ತೊಲಗಿಸಿ ಸಮಾಜದ ಸರ್ವತೋಮುಖ ಬೆಳವಣಿಗೆಗೆ ನೀಡಿದ ಕೊಡುಗೆ ಅನನ್ಯ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಬಸವ ಮತ್ತು ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ನಿಮಿತ್ಯವಾಗಿ ಹಮ್ಮಿಕೊಂಡ ಪೂಜಾ ಕಾರ್ಯಕ್ರಮದಲ್ಲಿ ಇಬ್ಬರೂ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನುಡಿದಂತೆ ನಡೆದ ವಚನಗಳ ಮೂಲಕ ಸಮಾನತೆ, ಕಾಯಕ ತತ್ವ, ದಾಸೋಹ ತತ್ವ ಅವರ ವಿಚಾರಧಾರೆಗಳು ಸರ್ವಕಾಲಕ್ಕೂ ಪ್ರಸ್ತುತ. ಹೇಮರೆಡ್ಡಿ ಮಲ್ಲಮ್ಮ ತಮ್ಮ ಬುದುಕಿನಲ್ಲಿ ಎದುರಿಸಿದ ಕಷ್ಟಗಳನ್ನೇ ಸಾಧನೆಯ ಮೆಟ್ಟಿಲುಗಳನ್ನಾಗಿ ಬದಲಾಯಿಸಿ ಸಮಾಜದ ಒಳಿತಿಗೆ ಶ್ರಮಿಸಿದ್ದಾರೆ ಎಂದರು.
ಈ ವೇಳೆ ಕಂದಾಯ ನೀರಿಕ್ಷಕ ಆಯ್.ಎ.ಮಕಾಂದಾರ, ನೀಖಿಲಅಹ್ಮದ್ ಖಾನಾಪೂರ, ಗುರು ತಾರಾಪೂರ, ಸಿದ್ದಬಸವ ಕುಂಬಾರ, ಆರ್.ಆರ್.ಪಾಟೀಲ ಸೇರಿದಂತೆ ಅನೇಕರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ:
ಪಟ್ಟಣದ ಎಪಿಎಂಸಿ ಯಾರ್ಡ್ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಬಸವ ಮತ್ತು ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ ಮಾಡಲಾಯಿತು.
ಈ ವೇಳೆ ಸಿಡಿಪಿಓ ಶಂಭುಲಿಂಗ ಹಿರೇಮಠ ಇಬ್ಬರೂ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಜಯಂತಿಯಲ್ಲಿ ಎಸಿಡಿಪಿಒಎಸ್.ಎನ್.ಕೋರವಾರ, ಸುನಿತಾ ಕಪ್ಪೆಣವರ, ವಿಜಯಕುಮಾರ ಸೇರಿದಂತೆ ಮೇಲ್ವೀಚಾರಕಿಯರು ಇದ್ದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜ ಸಿಂದಗಿ:
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬಸವ ಮತ್ತು ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಇದ್ದರು.
ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ:
ಪಟ್ಟಣದ ಬಂದಾಳ ರಸ್ತೆಯ ಮಲ್ಲಿಕಾರ್ಜುನ ಕಾಂಪ್ಲೇಕ್ಷನಲ್ಲಿರುವ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಬಸವ ಮತ್ತು ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ ಮಾಡಲಾಯಿತು.
ಈ ವೇಳೆ ರಶ್ಮಿ ನೂಲಾನವರ, ವಿದ್ಯಾಶ್ರೀ ದೇಸಾಯಿ ಸೇರಿದಂತೆ ಅನೇಕರಿದ್ದರು.
ದಲಿತ ಸಂಘರ್ಷ ಸಮಿತಿ ಕಾರ್ಯಾಲಯ:
ನಗರದಲ್ಲಿರುವ ದಲಿತ ಸಂಘರ್ಷ ಸಮಿತಿ ಕಾರ್ಯಾಲಯದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ ಮಾಡಲಾಯಿತು.
ಈ ವೇಳೆ ಜಿಲ್ಲಾ ಸಂಚಾಲಕ ವಾಯ್.ಸಿ.ಮಯೂರ ಮಾತನಾಡಿ, ಸಮಾನತೆಯ ಹರಿಕಾರ, ಸುಂದರ ಸಮಾಜದ ಕನಸುಕಾರ, ಕರುನಾಡುಕಂಡ ಮಹಾನ್‌ಚಿಂತಕ ಜಗಜ್ಯೋತಿ ಬಸವಣ್ಣನವರತತ್ವ, ಆದರ್ಶ, ಸಂದೇಶಗಳು ಇಂದಿಗೂ ಪ್ರಸ್ತುತ. ಇವರ ಒಂದೊಂದು ವಚನಗಳೂ ನಮಗೆ ದಾರಿದೀಪ ಎಂದರು.
ಈ ವೇಳೆ ಸಂಗಣ್ಣ ಬ್ಯಾಕೋಡ, ಪ್ರವೀಣ್ ಹಾಲಹಳ್ಳಿ, ಶರಣು ಚಲವಾದಿ, ನೀಲಕಂಠ ಹೂಸಮನಿ, ಶಿವುಪುತ್ರ ಮೇಲಿನಮನಿ, ಜೈಭೀಮ್ ಕೊಚಬಾಳ, ಜೈಭೀಮ್ ತಳಕೇರಿ, ಮುತ್ತು ಮಲಘಾಣ ಶೇಖರ ಬಂದಾಳ ಸೇರಿದಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

