ವಿಜಯಪುರ: ೨೦೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ಶೇ. ೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶೇ.೯೦ ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು (ಸಂಘದ ಸದಸ್ಯರು ಮಕ್ಕಳು ಮಾತ್ರ) ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ/ತಾಯಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು.
ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ ಸಂಘದ ದೃಢೀಕರಣದೊಂದಿಗೆ ನಿಗದಿತ ದಿನಾಂಕದೊಳಗೆ ಜಿಲ್ಲಾ ಘಟಕಕ್ಕೆ ಸಲ್ಲಿಸಬೇಕು.
ನಿಗದಿತ ದಿನಾಂಕದೊಳಗೆ ಸೂಕ್ತ ದಾಖಲೆಯೊಂದಿಗೆ ಜಿಲ್ಲಾ ಸಂಘದ ಮೂಲಕ ಅರ್ಜಿ ಸಲ್ಲಿಸದೇ ಇದ್ದ ಸದಸ್ಯರ ಮಕ್ಕಳನ್ನು ಪ್ರತಿಭಾ ಪುರಸ್ಕಾರಕ್ಕೆ ಪರಿಗಣಿಸುವುದಿಲ್ಲ. ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ಕಾಲೇಜ್ ಮುಖ್ಯಸ್ಥರಿಂದ ದೃಢೀಕರಿಸಿ ಅರ್ಜಿಯ ಜೊತೆ ಲಗತ್ತಿಸುವುದು ಕಡ್ಡಾಯ.
ಜಿಲ್ಲಾ ಸಂಘಕ್ಕೆ ಅರ್ಜಿ ಸಲ್ಲಿಸಲು ಮೇ ೧೮ ಕೊನೆಯ ದಿನ. ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆಧಾರ್ ಝರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್ ಝರಾಕ್ಸ್ ಹಾಗೂ ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರವನ್ನು ಲಗತ್ತಿಬೇಕು.
ಅರ್ಜಿ ಮತ್ತು ಇತರೆ ಮಾಹಿತಿಗಾಗಿ ಜಿಲ್ಲಾ ಸಂಘವನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಸಾಧಕರು
ವಿಜಯಪುರ: ಎಸ್ಸೆಸ್ಸೆಲ್ಸಿಯಲ್ಲಿ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯ ಸರಕಾರಿ ಆದರ್ಶ ವಿದ್ಯಾಲಯದ ಪವಿತ್ರಾ ಕೊಣ್ಣೂರ ೬೨೫, ಕಾರಜೋಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರತಿಭಾ ನರುಟಿ ೬೨೨ ಹಾಗೂ ಮುದ್ದೇಬಿಹಾಳದ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಭೂಮಿಕಾ ಜುಮನಾಳ ಹಾಗೂ ಅದೇಶ ಶಾಲೆಯ ಸುಕನ್ಯಾ ಅಂಗಡಿ ೬೨೦ ಅಂಕಗಳನ್ನು ಪಡೆದು ಜಿಲ್ಲೆಗೆ ಕ್ರಮವಾಗಿ ಸ್ಥಾನ ಪಡೆದಿದ್ದಾರೆ.

