ವಿಜಯಪುರ: ಮೂವರು ಕಳ್ಳರನ್ನು ಬಂಧಿಸಿರುವ ವಿಜಯಪುರ ಪೊಲೀಸರು, ಬಂಧಿತರಿಂದ 2.40 ಲಕ್ಷ ರೂ. ಮೌಲ್ಯದ
40 ಗ್ರಾಂ ತೂಕದ ಬಂಗಾರದ ಆಭರಣಗಳು ಜಪ್ತ ಮಾಡಿದ್ದಾರೆ.
ಬೆಳಗಾವಿ ಶಿವಬಸವ ನಸವಿತಾ ಸಂಜು ಲೊಂಡೆ (40), ನಿಪ್ಪಾಣಿಯ ಸ್ವಪ್ನಾ ವಿಕಾಸ ಜಾಧವ (30), ಪ್ರೇರಣಾ ಸತೀಶ ಚೌಗಲೆ(22) ಬಂಧಿತ ಆರೋಪಿತರು.
ನಗರದ ಸ್ಯಾಟ್ ಲೈಟ್ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾಗ ಇವರನ್ನು ಹಿಡಿದು ವಿಚಾರಣೆಗೊಳಪಡಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಬಂಗಾರದ ಆಭರಣ ಕಳ್ಳತನವಾದ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಭೇದಿಸಲು ಎಸ್ಪಿ ಋಷಿಕೇಶ್ ಸೋನಾವಣೆ ಅವರು ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ, ಡಿವೈಎಸ್ಪಿ ಬಸವರಾಜ ಎಲಿಗಾರ ಅವರ ಮಾರ್ಗದರ್ಶನದಲ್ಲಿ ಗಾಂಧಿಚೌಕ್ ಠಾಣೆ ಸಿಪಿಐ ಮಹಾಂತೇಶ ದ್ಯಾಮಣ್ಣವರ ನೇತೃತ್ವದಲ್ಲಿ ಒಂದು ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತನಿಖಾ ತಂಡವು ಕಾರ್ಯಾಚರಣೆ ನಡೆಸಿ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿತರನ್ನು ಬಂಧಿಸಿರುವ ತನಿಖಾ ತಂಡ್ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ರ್ಯವನ್ನು ಎಸ್ಪಿ ಋಷಿಕೇಶ ಸೋನಾವಣೆ ಅವರು ಶ್ಲಾಘಿಸಿ ಅವರಿಗೆ ಬಹುಮಾನ ಘೋಷಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

