ವಿಜಯಪುರ: ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ವಿದ್ಯಾವತಿ ಅಂಕಲಗಿ ಇವರ ನೇತೃತ್ವದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನವರ ಪ್ರಕರಣವನ್ನು ರಾಜ್ಯ ಸರಕಾರವು ಎಸ್.ಐ.ಟಿ. ಗೆ ವಹಿಸಿದ್ದನ್ನು ಸಮರ್ಥಿಸಿಕೊಂಡು ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ ಪ್ರಜ್ವಲ್ ರೇವಣ್ಣ ನವರ ಪ್ರಕರಣವನ್ನು ರಾಜ್ಯ ಸರಕಾರವು ಎಸ್.ಐ.ಟಿ. ಗೆ ವಹಿಸಿದ್ದು ನಮಗೆ ತೃಪ್ತಿ ಇದೆ. ಕರ್ನಾಟಕದ ಎಸ್.ಐ.ಟಿ. ಬಗ್ಗೆ ಭರವಸೆ ಇದ್ದು, ಕರ್ನಾಟಕದ ಪೊಲೀಸರು ದಕ್ಷರಿದ್ದು, ಈಗಾಗಲೇ ಛಾಪಾ ಕಾಗದ ಪ್ರಕರಣದಲ್ಲಿ ಹಾಗೂ ತೀರಾ ಇತ್ತೀಚಿನ ರಾಮೇಶ್ವರ ಕೆಫೆ ಬ್ಲಾಸ್ಟ್ ಪ್ರಕರಣವನ್ನು ಭೇದಿಸಿದ ಪ್ರಕರಣದಲ್ಲಿ ಇದನ್ನು ಸಾಬೀತು ಮಾಡಿದ್ದಾರೆ ಎಂದು ಹೇಳಿದರು. ಅಲ್ಲದೆ ಸಂಸದ ಪ್ರಜ್ವಲ್ ರೇವಣ್ಣ ನವರನ್ನು ಎಲ್ಲಿದ್ದರೂ ಕರೆತಂದು ಬಂಧಿಸಲು ಕೇಂದ್ರ ಸರಕಾರದವರು ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ಪ್ರಜ್ವಲ್ ರೇವಣ್ಣ ನವರ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಿಗೆ ಸೂಕ್ತ ರಕ್ಷಣೆಗಾಗಿ ವಿಶೇಷ ವ್ಯವಸ್ಥೆ ಹಾಗೂ ತುರ್ತಾಗಿ ಭರವಸೆಯ ಅವಶ್ಯಕತೆ ಇದೆ. ಸದರಿ ಪ್ರಕರಣವು ಒಂದು ಗಂಭೀರ ಸ್ವರೂಪದ್ದಾಗಿದ್ದು, ನಾಡಿನ ಜನತೆ ತಲೆತಗ್ಗಿಸುವಂತಹ ಹಾಗೂ ನಾಚಿಕೆಗೇಡಿನ ವಿಷಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾದೇವಿ ಗೋಕಾಕ, ಭಾರತಿ ಹೊಸಮನಿ, ಮಂಜುಳಾ ಗಾಯಕವಾಡ, ಆಸ್ಮಾ ಕಾಲೇಬಾಗ, ಹಮೀದಾ ಪಟೇಲ, ಮುಸ್ಕಾನ ಶಿವಣಗಿ, ಅಂಬಿಕಾ ಪಾಟೀಲ, ಶರಣಮ್ಮಾ ನಾಯಕ, ಜ್ಯೋತಿ ಗುಡಿಮನಿ, ಲಲಿತಾ ನಾಯಕ, ಭಾಗೀರಥಿ ನಾಗರಹಳ್ಳಿ, ಕಾಶಿಬಾಯಿ ಹಡಪದ, ಗಂಗವ್ವ ಕಣಮುಚನಾಳ, ಸುಮಿತ್ರಾ ಹನೂರ, ಶಶಿಕಲಾ ಮಣೂರ, ಶಾರದಾ ಬೆಟಗೇರಿ, ಅಶ್ವಿನಿ ಪಾತ್ರೋಟಿ, ಶಮೀಮಾ ಅಕ್ಕಲಕೋಟ, ಸಂಜನಾ ಬಜಂತ್ರಿ ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಪ್ರಜ್ವಲ್ ರೇವಣ್ಣಗೆ ಬಂಧಿಸಲು ಕೆಪಿಸಿಸಿ ಮಹಿಳಾ ಸಮಿತಿ ಆಗ್ರಹ
Related Posts
Add A Comment

